Advertisement

14.81 ಕೋಟಿ ರೂ. ಕಾಮಗಾರಿಗೆ ಚಾಲನೆ

07:10 AM Mar 07, 2019 | Team Udayavani |

ಚಿತ್ತಾಪುರ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಯೋಜನೆಯಡಿ ಕೈಗೊಂಡಿರುವ 14.81 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅಡಿಗಲ್ಲು ನೆರವೇರಿಸಿದರು.

Advertisement

ಪಟ್ಟಣದಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿದ ಒಳಾಂಗಣ ಕ್ರೀಡಾಂಗಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅನುದಾನದಲ್ಲಿ ಕೈಗೊಂಡ ತಲಾ ಒಂದು ಕೋಟಿ ರೂ. ವೆಚ್ಚದ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಕಟ್ಟಡ, ಮೆಟ್ರಿಕ್‌ ನಂತರದ ಬಾಲಕಿಯರ ವಸತಿ ನಿಲಯ ಕಟ್ಟಡ, ಮೆಟ್ರಿಕ್‌ ಪೂರ್ವ ಬಾಲಕರ ಮತ್ತು ಬಾಲಕಿಯರ (ಪ್ರತ್ಯೇಕ) ವಸತಿ ನಿಲಯದ ಕಟ್ಟಡವನ್ನು ಸಚಿವರು ಉದ್ಘಾಟಿಸಿದರು.

ಪಟ್ಟಣದಲ್ಲಿನ ಸರ್ಕಾರಿ ಪದವಿ ಕಾಲೇಜಿನಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಗಂಡುಮಕ್ಕಳ ವಸತಿ ನಿಲಯ ಕಟ್ಟಡ, 45 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಇಂದಿರಾ ಕ್ಯಾಂಟಿನ್‌ ಕಟ್ಟಡವನ್ನು ಲೋಕಾರ್ಪಣೆ ಮಾಡಿದರು.  

ಪಟ್ಟಣದ ನಾಗಾವಿ ದೇವಸ್ಥಾನದ ಹತ್ತಿರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಭವನ ಕಟ್ಟಡ ನಿರ್ಮಾಣ, 50 ಲಕ್ಷ ರೂ. ವೆಚ್ಚದಲ್ಲಿ ಎಪಿಎಂಸಿ ಆಡಳಿತ ಕಚೇರಿ ಕಟ್ಟಡದ ಮೇಲೆ ಸಭಾಭವನ ಕಟ್ಟಡ ನಿರ್ಮಾಣ, 8.75 ಲಕ್ಷ ರೂ. ವೆಚ್ಚದಲ್ಲಿ ತೆಂಗಳಿ ಕ್ರಾಸ್‌ ಹತ್ತಿರ ಪ್ರವೇಶ
ದ್ವಾರ ನಿರ್ಮಾಣ, 41 ಲಕ್ಷ ರೂ. ವೆಚ್ಚದಲ್ಲಿ 500 ಮೆಟ್ರಿಕ್‌ಟನ್‌ ಸಾಮರ್ಥ್ಯದ ಗೋದಾಮು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿದರು.

ಪಟ್ಟಣದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚುವರಿ ಕೋಣೆಗಳ ನಿರ್ಮಾಣ, 40 ಲಕ್ಷ ರೂ. ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್‌ ಯುನಿಟ್‌ ಅಳವಡಿಕೆ. ಒಂದು ಕೋಟಿ ರೂ. ವೆಚ್ಚದಲ್ಲಿ ಆಶ್ರಯ ಬಡಾವಣೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, 32.82 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟರ ಬಡಾವಣೆಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿದರು. 

Advertisement

21.34 ಲಕ್ಷ ರೂ. ವೆಚ್ಚದಲ್ಲಿ ವಾರ್ಡ್‌ ಸಂಖ್ಯೆ 15ರಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ, 8.70 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ (ಹೆಣ್ಣು ಮಕ್ಕಳ) ಒಂದು ಕೋಣೆ ಕಟ್ಟಡ ನಿರ್ಮಾಣ, 95 ಲಕ್ಷ ರೂ. ವೆಚ್ಚದಲ್ಲಿ ರೀಡಿಂಗ್‌ ಸೆಂಟರ್‌ ನಿರ್ಮಾಣ, 66 ಲಕ್ಷ ರೂ. ವೆಚ್ಚದಲ್ಲಿ ವಿವಿಧ
ಗ್ರಾಮಗಳಲ್ಲಿ ನಮ್ಮ ಹೊಲ ನಮ್ಮ ರಸ್ತೆ (ಪ್ಯಾಕೇಜ್‌ -1) ಯೋಜನೆಯಡಿ ರಸ್ತೆ ನಿರ್ಮಾಣ, 52 ಲಕ್ಷ ರೂ. ವೆಚ್ಚದಲ್ಲಿ ವಿವಿಧ ಗ್ರಾಮಗಳಲ್ಲಿ ನಮ್ಮ ಹೊಲ ನಮ್ಮ ರಸ್ತೆ (ಪ್ಯಾಕೇಜ್‌-2) ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಅಡಿಗಲ್ಲು ನೆರವೇರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next