ನವದೆಹಲಿ: ಕೋವಿಡ್ 19 ಲಸಿಕೆಗೆ ಖಾಸಗಿ ಆಸ್ಪತ್ರೆಗಳಲ್ಲಿ 150 ರೂಪಾಯಿ ಸೇವಾ ಶುಲ್ಕ ವಿಧಿಸಲು ದರ ನಿಗದಿಪಡಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಜೂನ್ 07) ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ಇದನ್ನೂ ಓದಿ:ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಉಚಿತ ಕೋವಿಡ್ ಲಸಿಕೆ…ಪ್ರಧಾನಿ ಮೋದಿ
ಕೋವಿಡ್ 19 ಲಸಿಕಾ ಉತ್ಪಾದನಾ ಸಂಸ್ಥೆಗಳಿಂದ ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಲಸಿಕೆಗಳನ್ನು ಖರೀದಿಸಬಹುದಾಗಿದೆ ಎಂದರು. ದೇಶದಲ್ಲಿ ಉತ್ಪಾದಿಸಲಾಗುವ ಶೇ.25ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ನೇರವಾಗಿ ಖರೀದಿಸಬಹುದಾಗಿದ್ದು, ಈ ವ್ಯವಸ್ಥೆ ಮುಂದುವರಿಯಲಿದೆ ಎಂದು ಪ್ರಧಾನಿ ತಿಳಿಸಿದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರದ ಅನ್ವಯ ಖಾಸಗಿ ಆಸ್ಪತ್ರೆಗಳು ಒಂದು ಡೋಸ್ ಲಸಿಕೆಗೆ ಗರಿಷ್ಠ ಸೇವಾ ಶುಲ್ಕ 150 ರೂಪಾಯಿ ಪಡೆಯಬಹುದಾಗಿದೆ ಎಂದು ಪ್ರಧಾನಿ ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುವ ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆ ರಾಜ್ಯ ಸರ್ಕಾರದ್ದಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಿ, ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆ ನೀಡಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.