Advertisement

ಕೇಂದ್ರ ಬಜೆಟ್ 2021: ಅತೀ ಸಣ್ಣ, ಸಣ್ಣ ಕೈಗಾರಿಕಾ ಕ್ಷೇತ್ರಕ್ಕೆ 15,700 ಕೋಟಿ

04:41 PM Feb 01, 2021 | Team Udayavani |

ನವದೆಹಲಿ:  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ(ಫೆ.1, 2021) ಸಂಸತ್ ನಲ್ಲಿ ಮಂಡಿಸಿದ 2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಅತೀ ಸಣ್ಣ, ಸಣ್ಣ ಹಾಗೂ ಮಧ್ಯಮ ಕೈಗಾರಿಕಾ(ಎಂಎಸ್ ಎಂಇ) ಕ್ಷೇತ್ರಗಳಿಗೆ 15, 700 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ.

Advertisement

ಇದನ್ನೂ ಓದಿ:ಭಾರತೀಯ ಅರ್ಥ ವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿ ಬಜೆಟ್: ಬಿ ಎಸ್ ಯಡಿಯೂರಪ್ಪ

ಕೈಗಾರಿಕೆ ಹಾಗೂ ಉತ್ಪಾದನಾ ಕ್ಷೇತ್ರಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ನಾವು ಬಜೆಟ್ ನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿರುವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಈ ಹಿಂದಿಗಿಂತಲೂ ಎಂಎಸ್ ಎಂಇ ಕ್ಷೇತ್ರಕ್ಕೆ ಎರಡು ಪಟ್ಟು ಹೆಚ್ಚು ಅನುದಾನ ನೀಡಲಾಗಿದೆ ಎಂದು ಹೇಳಿದರು.

ಸಣ್ಣ ಕಂಪನಿಗಳ ವ್ಯಾಖ್ಯಾನ ಬದಲು ಮಾಡುವ ಮೂಲಕ ಸುಮಾರು 2 ಲಕ್ಷ ಕಂಪನಿಗಳಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಕೇಂದ್ರ ಬಜೆಟ್ ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಇದನ್ನೂ ಓದಿ:2021 Budget: ಇದು ರೈತ ಪರ ಹಾಗೂ ಗ್ರಾಮೀಣ ಭಾರತದ ಬಜೆಟ್: ಪ್ರಧಾನಿ ನರೇಂದ್ರ ಮೋದಿ

Advertisement

ಸ್ಟಾರ್ಟ್ ಅಪ್ ಉದ್ಯಮಕ್ಕೂ ಇನ್ನೂ ಒಂದು ವರ್ಷ ರಿಲೀಫ್ ನೀಡಲಾಗಿದೆ. ಸ್ಟಾರ್ಟ್ ಅಪ್ ಕಂಪನಿಗಳ ಮೇಲಿನ ಲಾಭಕ್ಕೆ ತೆರಿಗೆ ವಿಧಿಸುವುದಿಲ್ಲ ಎಂದು ಕೇಂದ್ರ ಬಜೆಟ್ ನಲ್ಲಿ ಘೋಷಿಸಲಾಗಿದೆ.

ಏಕ ವ್ಯಕ್ತಿಗಳ ಕಂಪನಿಗಳ ಸ್ಥಾಪನೆಗೂ ಬಜೆಟ್ ನಲ್ಲಿ ಪ್ರೋತ್ಸಾಹ ನೀಡಲಾಗಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರ ಹಳೇ ವಾಹನಗಳನ್ನು ಸ್ಕ್ಯಾಪ್ ಮಾಡುವ ಗುಜರಿ ನೀತಿಯನ್ನು ಜಾರಿಗೆ ತರುವುದಾಗಿ ಘೋಷಿಸಿದೆ.

ಕೇಂದ್ರದ  ಈ ಹೊಸ ನೀತಿಯಿಂದಾಗಿ ವಾಹನ ತಯಾರಿಕೆಗೆ ಹಾಗೂ ಮಾರಾಟಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಲಿದೆ. ಕೇಂದ್ರದ ನೀತಿ ಪ್ರಕಾರ 15 ವರ್ಷ ಮೇಲ್ಪಟ್ಟ ವಾಣಿಜ್ಯ ಬಳಕೆಯ ವಾಹನಗಳನ್ನು ಸಂಚಾರಕ್ಕೆ ಬಳಸುವಂತಿಲ್ಲ. ಹಾಗೂ ಜನರು ಬಳಸುವ 20 ವರ್ಷಕ್ಕಿಂತ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next