Advertisement

ಬರ ಪರಿಹಾರ; ರಾಜ್ಯಕ್ಕೆ ಕೇಂದ್ರದಿಂದ ಕೇವಲ 1,782 ಕೋಟಿ ರೂ. ಬಿಡುಗಡೆ!

04:41 PM Jan 05, 2017 | Sharanya Alva |

ನವದೆಹಲಿ:ತೀವ್ರ ಬರಗಾಲದಿಂದ ತತ್ತರಿಸಿ ಹೋಗಿರುವ ಕರ್ನಾಟಕಕ್ಕೆ 4,702 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕೊನೆಗೂ ರಾಜ್ಯಕ್ಕೆ 1,782.44 ಕೋಟಿ ರೂ. ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಗುರುವಾರ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೇ 2013ರ ಪ್ರವಾಹದಲ್ಲಿ ತತ್ತರಿಸಿ ಹೋಗಿದ್ದ ಉತ್ತರಾಖಂಡ್ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 209 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

Advertisement

ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಎದುರಿಸುತ್ತಿದ್ದು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ 4,702.54 ಕೋಟಿ ರೂ. ಪರಿಹಾರ ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ವಪಕ್ಷ ನಿಯೋಗ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

ಈ ನಿಟ್ಟಿನಲ್ಲಿ ಕೇಂದ್ರ ಸಚಿವಾಲಯದ ತಂಡ ಪರಿಶೀಲಿಸಿ ನೀಡಿದ ವರದಿ ಆಧಾರದ ಮೇಲೆ ದೆಹಲಿಯಲ್ಲಿ ಇಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರು ಕರ್ನಾಟಕಕ್ಕೆ 1,782.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next