ಕಷ್ಟಕರವಾಗಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶೀಘ್ರವೇ ಪುನಾರಂಭಿಸಲಾಗುವುದು’ ಎಂದು ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
Advertisement
ಪ್ರಶ್ನೋತ್ತರ ಅವಧಿಯಲ್ಲಿ ಶುಕ್ರವಾರ ಬಿಜೆಪಿಯ ತಾರಾ ಅನುರಾಧ ಪ್ರಶ್ನೆಗೆ ಉತ್ತರಿಸಿದ ಅವರು, “ತಾತ್ಕಾಲಿಕವಾಗಿ 2 ರೂ. ಪ್ರೋತ್ಸಾಹಧನ ಯೋಜನೆ ಸ್ಥಗಿತಗೊಳಿಸಲಾಗಿದೆ. ಸದ್ಯದಲ್ಲೇ ಹೊಸ ನಿಯಮಾವಳಿ ರೂಪಿಸಿ ಚಾಲನೆ ನೀಡಲಾಗುವುದು. ಸರ್ಕಾರ ನುಡಿದಂತೆ ನಡೆದುಕೊಳ್ಳಲಿದೆ’ ಎಂದು ಹೇಳಿದರು. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಹೆಣ್ಣು ಮಕ್ಕಳಿಗೆ 2 ರೂ. ನೀಡುವ ಜವಾಬ್ದಾರಿಯನ್ನು ಮುಖ್ಯ ಶಿಕ್ಷಕ, ಶಿಕ್ಷಕರಿಗೆ ವಹಿಸಲಾಗಿತ್ತು. ಅವರ ವರದಿಯಂತೆ ಹಣ ಬಿಡುಗಡೆಯಾಗುತ್ತದೆ. ಅನೇಕ ಪ್ರಕರಣದಲ್ಲಿ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಸಚಿವರು ಹೇಳಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಸರ್ಕಾರವೇ ಯೋಜನೆ ಘೋಷಿಸಿರುವುದರಿಂದ ಮುಂದುವರಿಸಬೇಕೆಂದು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ವಿದ್ಯಾರ್ಥಿನಿಯರಿಗೆ ನೀಡುವ 2 ರೂ.ಗೆ ಮಾನ್ಯತೆ ಇಲ್ಲದಂತಾಗಿದೆ. ಅದು ವಿದ್ಯಾರ್ಥಿಗಳಿಗೂ ಗೊತ್ತಾಗುವುದಿಲ್ಲ. ಅಲ್ಲದೆ ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದಲೂ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ಹೇಳಿದರು.