ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಗೊಳಿಸಿದರಿಂದ ಸಂಕಷ್ಟಕ್ಕೆ ಒಳಗಾದ ಅಸಂಘಟಿತ ವಲಯದ ಕಾರ್ಮಿಕರಿಗೆ 2 ಸಾವಿರ ರೂಗಳ ನೆರವು ಪಡೆಯಲು ಸೇವಾ ಸಿಂಧು ಪೋರ್ಟ್‍ಲ್‍ನಲ್ಲಿ ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ತಿಳಿಸಿದರು.
ಉದಯವಾಣಿಯೊಂದಿಗೆ ಮಾತನಾಡಿದವರು ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಹಾಗೂ ನೊಂದಾಯಿತವಲ್ಲದ 11 ವಲಯದ ಅಸಂಘಟಿತ ಕಾರ್ಮಿಕರ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್‍ಗಳು, ಹಮಾಲರು, ಚಿಂದಿ ಆಯುವವರು, ಅಕ್ಕಸಾಲಿಗರು, ಮೆಕಾನಿಕ್‍ಗಳು, ಕುಂಬಾರರು, ಕಮ್ಮಾರರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರಿಗೆ ಒಂದು ಬಾರಿ 2000 ರೂಗಳ ನೆರವು ನೀಡಲು ಸರ್ಕಾರ ಘೋಷಿಸಿದೆ ಎಂದರು.
ಕಾರ್ಮಿಕ ಇಲಾಖೆಯಲ್ಲಿ ಈಗಾಗಲೇ ನೊಂದಾಯಿತ ಕಾರ್ಮಿಕರು ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ನೇರವಾಗಿ ಅವರ ಬ್ಯಾಂಕ್ ಖಾತೆಗೆ ಸಹಾಯಧನ ಜಮಾ ಆಗಲಿದೆ. ಆದರೆ ನೊಂದಾಯಿತವಲ್ಲದ ಕಾರ್ಮಿಕರು ಮಾತ್ರ ಕಡ್ಡಾಯವಾಗಿ ಸೇವಾ ಸಿಂಧು ಪೋರ್ಟಲ್‍ನಲ್ಲಿ ಕೋವಿಡ್ 19 ರ ಆಡಿ ಕಟ್ಟಡ ಕಾರ್ಮಿಕರು ಹಾಗೂ ಘೋಷಿತ 11 ವರ್ಗಗಳಲ್ಲಿ ಕೇವಲ ಒಂದು ವೃತ್ತಿಗೆ ಮಾತ್ರ ಕುಟುಂಬದಲ್ಲಿನ ಒಬ್ಬ ಸದಸ್ಯರು ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಅರ್ಜಿ ಸಲ್ಲಿಸುವವರು ಬಿಪಿಎಲ್ ಕಾರ್ಡ್ ಹೊಂದಿರಬೇಕು. ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆ ಹೊಂದಿರಬೇಕು. ತಮ್ಮ ವ್ಯಾಪ್ತಿಯ ಸಂಬಂಧಿಸಿದ ಅಧಿಕಾರಿಗಳಿಂದ ಉದ್ಯೋಗ ಪ್ರಮಾಣ ಪತ್ರ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಪಕ್ಷದ ಹೆಸರನ್ನು ಆ್ಯಂಟಿ ನ್ಯಾಶನಲ್ ಕ್ಲಬ್‍ಹೌಸ್ ಎಂದು ಬದಲಿಸಿ: ಕ್ಯಾ.ಕಾರ್ಣಿಕ್
ಅಸಂಘಟಿತ 11 ವಲಯದ ಕಾರ್ಮಿಕರು ಉದ್ಯೋಗ ಪ್ರಮಾಣಪತ್ರಕ್ಕಾಗಿ ಬಿ.ಬಿ.ಎಂ.ಪಿ ವ್ಯಾಪ್ತಿಯ ವಾರ್ಡ್‍ಗಳ ಮಟ್ಟದಲ್ಲಿನ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಿರಿಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಕರು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರಿಂದ, ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು, ಉಪ ತಹಶೀಲ್ದಾರ್, ಕಂದಾಯ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಂದ ಅಥವಾ ಪತ್ರಾಂಕಿತ ಅಧಿಕಾರಿಗಳಿಂದ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.