Advertisement

ಗಣಿಬಾಧಿತ ಪ್ರದೇಶಾಭಿವೃದ್ಧಿಗೆ 21 ಸಾವಿರ ಕೋಟಿ ರೂ.

03:42 PM Aug 16, 2018 | Team Udayavani |

ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 72ನೇ ಸ್ವಾತಂತ್ರ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ, ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಬಳಿಕ ಧ್ವಜವಂದನೆ
ಸ್ವೀಕರಿಸಿದರು.

Advertisement

ಬಳಿಕ ಮಾತನಾಡಿದ ಸಚಿವರು, ಜಿಲ್ಲೆಯ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿ ಆರೋಗ್ಯ, ಶಿಕ್ಷಣ, ಪರಿಸರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕೃಷಿ, ವಸತಿ ಸೌಕರ್ಯ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗಾಗಿ 21813 ಕೋಟಿ ರೂ.ಗಳ ಯೋಜನೆ ಕೈಗೊಳ್ಳಲಾಗುವುದು ಎಂದರು.

ಕುಡಿಯುವ ನೀರು ಸೇರಿದಂತೆ ವಿವಿಧ ಯೋಜನೆಗಳಿಗೆ ಹಣ ವಿನಿಯೋಗಿಸಲಾಗುತ್ತಿದೆ. ತಾಲೂಕಿನ ಹಗರಿ ಕೃಷಿ ಕಾಲೇಜು ಉನ್ನತೀಕರಣಕ್ಕೆ ಸರಕಾರ ಕಟಿಬದ್ಧವಾಗಿದೆ ಎಂದರು.
 
ವಿದ್ಯಾರ್ಥಿ ಆ್ಯಪ್‌ ಬಿಡುಗಡೆ: ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆ ಅಗ್ರ ಸ್ಥಾನ ಹೊಂದಿದೆ. ವಿದ್ಯಾರ್ಥಿ ಬೆಳಕು ಯೋಜನೆಯಡಿ ವಾರ್ಷಿಕ 4 ಸಾವಿರ ರೂ. ಶಿಷ್ಯವೇತನವನ್ನು ಒಬ್ಬೊಬ್ಬ ವಿದ್ಯಾರ್ಥಿಗೆ ನೀಡಲಾಗುತ್ತಿದೆ. ಇದಕ್ಕಾಗಿ ವಿದ್ಯಾರ್ಥಿ-ಬೆಳಕು ಆ್ಯಪ್‌ ಬಿಡುಗಡೆ ಮಾಡಲಾಗುತ್ತಿದೆ. ಆಡಳಿತದಲ್ಲಿ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಡಿಸಿ ಕಚೇರಿಯಲ್ಲಿ ಪೇಪರ್‌ಲೆಸ್‌ ಆಫೀಸ್‌ ಪ್ರಾರಂಭಿಸಲಾಗುತ್ತದೆ. ಆನ್‌ಲೈನ್‌ ಮೂಲಕ ಎನ್‌ಎ ಅರ್ಜಿಗಳನ್ನು ಇತ್ಯರ್ಥಗೊಳಿಸಲಾಗುತ್ತದೆ. ಬಳ್ಳಾರಿ ನಗರಕ್ಕೆ ತುಂಗಭದ್ರಾ ಜಲಾಶಯದಿಂದ ನೇರವಾಗಿ
ನೀರು ಪಡೆಯುವ ವ್ಯವಸ್ಥೆ ರೂಪಿಸಲಾಗಿದ್ದು, ಕಾರ್ಯಗತಗೊಳಿಸಲಾಗುವುದು. ನೀರಾವರಿ ಕ್ಷೇತ್ರದಲ್ಲಿ ಎಚ್‌ಎಲ್‌ಸಿ, ಎಲ್‌ಎಲ್‌ಸಿ ಕಾಲುವೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ರಾಜ್ಯಸಭೆ ಸದಸ್ಯ ಸೈಯ್ಯದ್‌ ನಾಸೀರ್‌ ಹುಸೇನ್‌, ಶಾಸಕರಾದ ಜಿ.ಸೋಮಶೇಖರರೆಡ್ಡಿ, ಬಿ. ನಾಗೇಂದ್ರ, ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ, ಮೇಯರ್‌ ಆರ್‌. ಸುಶೀಲಾಬಾಯಿ, ಜಿಲ್ಲಾ ಧಿಕಾರಿ ಡಾ| ವಿ.ರಾಮ್‌ ಪ್ರಸಾತ್‌ ಮನೋಹರ್‌, ಎಸ್‌ಪಿ ಅರುಣ್‌ ರಂಗರಾಜನ್‌, ಜಿಪಂ ಸಿಇಒ ಡಾ| ಕೆ.ವಿ.ರಾಜೇಂದ್ರ, ಪ್ರೋಬೇಷನರಿ ಐಎಎಸ್‌ ಅ ಧಿಕಾರಿ ನಂದಿನಿ ಸೇರಿದಂತೆ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next