Advertisement
ಮೊಳಕಾಲ್ಮೂರಿನ ಹೆತ್ತಲ ಬೊಮ್ಮನಹಟ್ಟಿ ಗ್ರಾಮದ ಬಳಿ ಬೆಳಗಿನ ಜಾವ 4 ಗಂಟೆ ವೇಳೆ ಐಟಿ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ 2.17 ಕೋಟಿ ರೂಪಾಯಿ ಹಣ ಜಪ್ತಿ ಮಾಡಿ, ಕಾರಿನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ಗ್ರಾಮಾಂತರ ದ ದೇವನಹಳ್ಳಿ ಯ ನವಯುಗ ಚೆಕ್ ಪೋಸ್ಟ್ ಬಳಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 17 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಾಲಕ ನವೀನ್ ಕುಮಾರ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Related Articles
Advertisement
ಕಾರವಾರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಸತೀಶ್ ಸೈಲ್ ಅವರ ಆಪ್ತ ಮಂಗಲದಾಸ್ ಕಾಮತ್ ಅವರ ಅಂಕೋಲದ ಆವರ್ಸಾ ಗ್ರಾಮದ ನಿವಾಸದ ಮೇಲೆ ಐಟಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರಿನಲ್ಲೂ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.