Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರನ್ನು ಮಾದರಿ ನಗರವಾಗಿ ಮಾಡುವ ದೃಷ್ಟಿಯಿಂದ ಎಡಿಬಿ ಎರಡನೇ ಹಂತದ ಕಾಮಗಾರಿಗೆ 600 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ ಎಂದರು.
ನನ್ನ ಕ್ಷೇತ್ರವಲ್ಲದಿದ್ದರೂ ನಾನು ಮುತುವರ್ಜಿ ವಹಿಸಿ ಪಂಜಿಮೊಗರಿನಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಗ್ರಾಮವನ್ನು
ಸ್ಥಾಪಿಸಲು ಸುಮಾರು 1,000 ಎಕರೆ ಭೂಮಿಯನ್ನು ಗುರುತಿಸಿದ್ದೇನೆ. ನೇತ್ರಾವತಿ ಸೇತುವೆಯಿಂದ ಕಣ್ಣೂರು ಮಸೀದಿ ವರೆಗೆ ನದಿ ತೀರದಲ್ಲಿ ಚತುಷ್ಪಥ ರಸ್ತೆಯನ್ನು ನಿರ್ಮಿಸುವ ಯೋಜನೆಗೆ ಸಂಬಂಧಿಸಿ ಬೆಂಗಳೂರಿನಿಂದ ಅಧಿಕಾರಿಗಳ ತಂಡ ಬಂದು ಅಧ್ಯಯನ ನಡೆಸಿದೆ. ಇಲ್ಲಿ ಸುಮಾರು 350ರಿಂದ 400 ಕೋಟಿ ರೂಪಾಯಿ ಹೂಡಿಕೆ ಆಗಲಿದೆ. ಇದನ್ನು ಖಾಸಗಿ ಮತ್ತು ಸರಕಾರಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು. ಈ ಯೋಜನೆ ಸಾಕಾರಗೊಂಡರೆ ಜಪ್ಪಿನಮೊಗರು ಪ್ರದೇಶ ಬೆಳೆಯುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದರು. ಮಂಗಳೂರು ಹಳೆ ಬಂದರು ಮತ್ತು ನವಮಂಗಳೂರು ಬಂದರಿಗೆ ಸಂಪರ್ಕ ಸಾಧಿಸುವ ಯೋಜನೆಯೂ ಇದೆ ಎಂದ ಅವರು, ಇವೆಲ್ಲವುಗಳಿಗೂ ಜನರ ಸಹಕಾರ ಅತಿ ಅಗತ್ಯ ಎಂದರು. ಜಪ್ಪಿನಮೊಗರು ಪ್ರದೇಶವನ್ನು ಅಭಿವೃದ್ಧಿಪಡಿಸಲು ಮೊದಲ ಕಂತಾಗಿ 1.5 ಕೋಟಿ ರೂಪಾಯಿ ಮಂಜೂರಾಗಿದ್ದು,
ಜನರು ಆಸಕ್ತಿ ವಹಿಸಿ ಜಾಗ ಬಿಟ್ಟುಕೊಟ್ಟರೆ ಇನ್ನೂ ಹೆಚ್ಚಿನ ಅನುದಾನವನ್ನು ಮಂಜೂರು ಮಾಡಿಸಿ, ಇದನ್ನು ಮಾದರಿ ನಗರವಾಗಿ ಮಾಡುವ ಸಂಕಲ್ಪವಿದೆ ಎಂದರು.
Related Articles
Advertisement