Advertisement
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ರಾಜಕುಮಾರ್ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದೇವಾಲಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಂದು ಕೋಟಿ ರೂ.ವರೆಗಿನ ಪ್ರಸ್ತಾವನೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲೇ ಅನುಮತಿ ದೊರೆಯಲಿದೆ. ಆದಕ್ಕಿಂತ ಹೆಚ್ಚಿನ ಮೊತ್ತ ಇದ್ದರೆ ಮಾತ್ರ ಆಯುಕ್ತರ ಹಂತಕ್ಕೆ ಬರಲಿದೆ ಎಂದು ತಿಳಿಸಿದರು.
ಬಿಜೆಪಿಯ ಲಾಲಾಜಿ ಆರ್. ಮೆಂಡನ್ ಅವರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸಪೂಜಾರಿ, ಮೀನುಗಾರಿಕೆ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ಮತ್ಸಾéಶ್ರಯ ವಸತಿ ಯೋಜನೆ 2017-18 ನೇ ಸಾಲಿನಿಂದ ರಾಜೀವ್ ಗಾಂಧಿ ವಸತಿ ನಿಗದಮ ಮೂಲಕ ಅನುಷ್ಟಾನ ಮಾಡಲಾಗುತ್ತಿದ್ದು ಕೆಲವೊಂದು ತಾಂತ್ರಿಕ ಕಾರಣಳಿಂದ ಅನುಷ್ಟಾನದಲ್ಲಿ ವಿಳಂಬವಾಗಿರುತ್ತದೆ. ಹೀಗಾಗಿ, ಯೋಜನೆಯನ್ನು ರಾಜೀವ್‌ಗಾಂಧಿ ವಸತಿ ನಿಗಮದಿಂದ ವಾಪಸ್ ಪಡೆದು ಹಿಂದೆ ಇದ್ದಂತೆ ಕರ್ನಾಟಕ ಮೀನುಗಾರಿಕೆ ಅಭವೃದ್ಧಿ ನಿಗಮಕ್ಕೆ ವಹಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.