ಅಡುಗೆ ಮನೆಗಳನ್ನು ಆರಂಭಿಸಲು 46.59 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
Advertisement
ರಾಜ್ಯದ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇಂದಿರಾ ಕ್ಯಾಂಟೀನ್ ಅನುಷ್ಠಾನಗೊಳಿಸಲು ಪೌರಾಡಳಿತ ಇಲಾಖೆಗೆ ಜವಾಬ್ದಾರಿ ವಹಿಸಲಾಗಿದೆ. ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ಇಲಾಖೆಗೆ ಹಣ ಬಿಡುಗಡೆ ಮಾಡಿದ್ದು, ಇಂದಿರಾ ಕ್ಯಾಂಟೀನ್ ಅನುಷ್ಠಾನಕ್ಕೆ ಬಿಡುಗಡೆ ಮಾಡಿರುವ ಹಣವನ್ನು ಬೇರೆ ಯಾವುದೇ ಯೋಜನೆಗಳಿಗೆ ಬಳಸದಂತೆ ಷರತ್ತು ವಿಧಿಸಲಾಗಿದೆ. ಅಲ್ಲದೆ, ಇಂದಿರಾ ಕ್ಯಾಂಟೀನ್ ಯೋಜನೆಗೆ ಬಳಸಿರುವ ಖರ್ಚಿನ ಲೆಕ್ಕವನ್ನೂ ಸರ್ಕಾರಕ್ಕೆ ಸಲ್ಲಿಸುವಂತೆ ಪೌರಾಡಳಿತ ಇಲಾಖೆ ನಿರ್ದೇಶನಾಲಯಕ್ಕೆ ಸೂಚಿಸಲಾಗಿದೆ.