Advertisement

ಪ್ರವೀಣ್‌ ಕುಟುಂಬಕ್ಕೆ ಐದು ಲಕ್ಷ ರೂ. ಪರಿಹಾರ

12:13 PM Sep 03, 2018 | |

ಬೆಂಗಳೂರು: ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ ಪ್ರವೀಣ್‌ ಅಂತಿಮ ದರ್ಶನ ಪಡೆದ ಮೇಯರ್‌ ಆರ್‌.ಸಂಪತ್‌ರಾಜ್‌, ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Advertisement

ವಿಭೂತಿಪುರದಲ್ಲಿ ಕಳೆದ ಬುಧವಾರ ಬಯಲು ಬಹಿರ್ದೆಸೆಗೆ ಮುಂದಾದಾಗ ಸುಮಾರು ಹತ್ತು ಬೀದಿ ನಾಯಿಗಳು ಪ್ರವೀಣ್‌ ಮೇಲೆ ದಾಳಿ ನಡೆಸಿದ್ದವು. ನಾಯಿಗಳು ಕುತ್ತಿಗೆಗೆ ಬಾಯಿ ಹಾಕಿ ಕಚ್ಚಿದ್ದರಿಂದ ಪ್ರವೀಣ್‌ ಗಂಭೀರವಾಗಿ ಗಾಯಗೊಂಡಿದ್ದ. ಎರಡು ದಿನಗಳ ಕಾಲ ನಿರಂತರ ಚಿಕಿತ್ಸೆ ನೀಡಿದ ಹೊರತಾಗಿಯೂ ಬಾಲಕ ಶನಿವಾರ ರಾತ್ರಿ ಮೃತಪಟ್ಟಿದ್ದ.

ವಿಷಯ ತಿಳಿಯುತ್ತಿದ್ದಂತೆ ಭಾನುವಾರ ಬೆಳಗ್ಗೆ ಸ್ಥಳಕ್ಕೆ ಧಾವಿಸಿದ ಮೇಯರ್‌, ಬಾಲಕನ ಅಂತಿಮ ದರ್ಶನ ಪಡೆದು, ಪೋಷಕರಿಗೆ ಸಾಂತ್ವನ ಹೇಳಿದರು. ಜತೆಗೆ ಮೃತರ ಕುಟುಂಬಕ್ಕೆ ಪಾಲಿಕೆಯಿಂದ ಐದು ಲಕ್ಷ ರೂ. ಪರಿಹಾರ ನೀಡುವ ಜತೆಗೆ, 8 ಲಕ್ಷ ರೂ. ವೈದ್ಯಕೀಯ ವೆಚ್ಚವನ್ನೂ ಪಾಲಿಕೆಯಿಂದಲೇ ಭರಿಸುವುದಾಗಿ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಮೇಯರ್‌ ಸಂಪತ್‌ರಾಜ್‌, ಬೀದಿ ನಾಯಿಗಳ ದಾಳಿಯಿಂದ ಬಾಲಕ ಮೃತಪಟ್ಟಿರುವುದು ತೀವ್ರ ನೋವು ತಂದಿದೆ. ಇಂತಹ ಪರಿಸ್ಥಿತಿ ಯಾರಿಗೂ ಬರುವುದು ಬೇಡ. ಹೀಗಾಗಿ ನಗರದಲ್ಲಿ ಬೀದಿ ನಾಯಿ ಹಾವಳಿ ತಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಪಾಲಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next