ವ್ಯಾಪ್ತಿಯಲ್ಲೇ ಸುಮಾರು 500 ಕೋಟಿ ರೂ. ನಷ್ಟವಾಗಿದೆ ಎಂಬ ಅಂದಾಜಿದೆ. ಹೂ ಬೆಳೆಗಾರರಿಗೆ ಆಗುತ್ತಿರುವ ನಷ್ಟದ ಬಗ್ಗೆ ಕಾಂಗ್ರೆಸ್ ಮುಖಂಡರು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಗಮನ ಸೆಳೆದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು.
Advertisement
ತಾಲೂಕಿನ ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮಂತ ನಗರದಲ್ಲಿ ಆಹಾರ ಪದಾರ್ಥಗಳ ವಿತರಣೆ ಕಾರ್ಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರು, ಸಾಮಾನ್ಯ ಜನತೆಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಮತ್ತು ಕೆಲವೊಂದು ಸಲಹೆಗಳನ್ನು ನೀಡುವ ಸಲುವಾಗಿ ರಾಜ್ಯ ಕಾಂಗ್ರೆಸ್ ನಿಂದ ನಿಯೋಗ ಮುಖ್ಯಮಂತ್ರಿಗಳನ್ನುಭೇಟಿ ಮಾಡಿತ್ತು. ಈ ವೇಳೆ ಹೂ ಬೆಳೆಗಾರರ ನಷ್ಟದ ಬಗ್ಗೆಯೂ ಗಮನ ಸೆಳೆಯಲಾಗಿದೆ ಎಂದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಎಚ್ಚರ ವಹಿಸುವಂತೆ ತಾವು ಈಗಾಗಲೇ ಜಿಲ್ಲಾಡಳಿತಕ್ಕೆ ಮುನ್ಸೂಚನೆ ನೀಡಿರುವುದಾಗಿ ತಿಳಿಸಿದರು.