Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಿದ ನಂತರ 2ನೇ ಹಂತದಲ್ಲಿ 21 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ.
Related Articles
ಹಾಸನ: ರೈತರಿಂದ ನೇರವಾಗಿ ಕೆಎಂಎಫ್ನಿಂದ ಮೆಕ್ಕೆಜೋಳ ಖರೀದಿಸುವ ನಿರ್ಧಾರ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗದಿತ ದರದಲ್ಲಿ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಸುವ ಸಂಬಂಧ ಈಗಾಗಲೇ ಕೆಎಂಎಫ್ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ನಡೆಸಿದ್ದೇನೆ. ಸಾಲುಸಾಲು ರಜೆಗಳ ಹಿನ್ನೆಲೆಯಲ್ಲಿ ಖರೀದಿಸಲು ಸಾಧ್ಯವಾಗಿಲ್ಲ. ವಾರದೊಳಗೆ ಅಧಿಕೃತವಾಗಿ ಮೆಕ್ಕೆ ಜೋಳ ಖರೀದಿಯ ಆದೇಶ ಹೊರಬೀಳಲಿದೆ ಎಂದು ಹೇಳಿದರು.
ವಿವಾದಕ್ಕೆ ತೆರೆ: ರೈತರಿಂದ ಕೆಎಂಎಫ್ ನೇರವಾಗಿ ಮೆಕ್ಕೆಜೋಳ ಖರೀದಿಸಬೇಕು ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ ಅವರು ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಜೆಡಿಎಸ್‌ನಿಂದ ಪ್ರತಿಭಟನೆಯನ್ನೂ ಮಾಡಿದ್ದರು. ಈಗ ಸಹಕಾರ ಸಚಿವರೇ ಮೆಕ್ಕೆಜೋಳ ಖರೀದಿಗೆ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ವಿವಾದಕ್ಕೆ ತೆರೆ ಎಳೆದಂತಾಗಿದೆ.
ಸಹಕಾರ ಇಲಾಖೆ ಅಧೀನದಲ್ಲಿ ಕೆಎಂಎಫ್ ಬಂದರೂ ಕೆಎಂಎಫ್ ಪ್ರತ್ಯೇಕ ಮಂಡಳಿ. ಅದಕ್ಕೆ ಅಧ್ಯಕ್ಷರು, ಆಡಳಿತ ಮಂಡಳಿ ಇದೆ. ಅಧಿಕೃತವಾಗಿ ಅವರು ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಸಹಕಾರ ಸಚಿವನಾಗಿ ನಾನು ಮೆಕ್ಕೆಜೋಳ ಖರೀದಿಗೆ ಸೂಚನೆ ಕೊಟ್ಟಿದ್ದೇನೆ. ಮುಂದಿನ ಪ್ರಕ್ರಿಯೆಯನ್ನು ಕೆಎಂಎಫ್ ನಿರ್ವಹಣೆ ಮಾಡಲಿದೆ ಎಂದು ಕೆ.ಎನ್.ರಾಜಣ್ಣ ಹೇಳಿದರು.