Advertisement
ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಬ್ಲಾಕ್ ಮನಿ ಹೋಲ್ಡರ್‌ಗಳಿಂದ ಕೋಟ್ಯಂತರ ರೂಪಾಯಿ ಪಡೆದುಕೊಂಡಿದ್ದೀರಿ; ಅವರಿಗೆ ಏನೇನು ಲಾಭ ಮಾಡಿದ್ದೀರೋ ಗೊತ್ತಿಲ್ಲ ಎಂದರು.
ಕರಾವಳಿಯಲ್ಲಿ ನೀವು ಓಡಾಡುವ ರಸ್ತೆ, ಸೇತುವೆ, ಮಂಗಳೂರು ವಿಮಾನ ನಿಲ್ದಾಣ, ಬಂದರು ನಿರ್ಮಿಸಿದ್ದು ಕಾಂಗ್ರೆಸ್, ನಮ್ಮಿಂದ ಫಲ ಪಡೆದು ನಮ್ಮನ್ನೇ ಮರೆತರೆ ಯಾವ ನ್ಯಾಯ ಎಂದು ಮಲ್ಲಿಕಾರ್ಜುನ ಖರ್ಗೆ ಜನರಲ್ಲಿ ಪ್ರಶ್ನಿಸಿದರು.
Related Articles
ಸೆಕ್ಯುಲರ್ ಎಂಬ ಹೆಸರು ಇಟ್ಟುಕೊಂಡ ಪಕ್ಷದ ನಾಯಕ ಎಚ್.ಡಿ. ದೇವೇಗೌಡರು ಈಗ ಮೋದಿ ತೊಡೆ ಮೇಲೆ ಕೂತಿದ್ದಾರೆ. ಒಂದೊಮ್ಮೆ ದೂರುತ್ತಿದ್ದವರು ಈಗ ಮುದ್ದಾಡುತ್ತಿದ್ದಾರೆ. ಅವರು ಏನೇ ಮಾಡಲಿ ನಮ್ಮ ಗ್ಯಾರಂಟಿ ಯೋಜನೆಗಳು, ಬಜೆಟ್‌ನ್ನು ನೋಡಿದ ಮೇಲೆ ರಾಜ್ಯದಲ್ಲಿ ಕನಿಷ್ಠ 20 ಸೀಟ್‌ಗಳನ್ನಾದರೂ ಗೆದ್ದೇ ಗೆಲ್ಲಲಿದ್ದೇವೆ ಎಂಬ ವಿಶ್ವಾಸ ಹುಟ್ಟಿದೆ ಎಂದು ಖರ್ಗೆ ಹೇಳಿದರು.
Advertisement
ನರೇಂದ್ರ ಮೋದಿ ಇನ್ನು ಚುನಾವಣೆ ನಡೆಸುವುದಿಲ್ಲ. ಯಾಕೆಂದರೆ ಅವರು ಸರ್ವಾಧಿಕಾರಿ ಆಗಲು ಹೊರಟಿದ್ದಾರೆ. ಇನ್ನು ಚುನಾವಣೆ ಕೂಡ ನಡೆಸುವುದಿಲ್ಲ, ಎಲ್ಲವೂ ತನ್ನ ಕೈಯಲ್ಲೇ ಇರಬೇಕು ಎಂದು ಭಾವಿಸುತ್ತಾರೆ. ಮಾಧ್ಯಮ, ನ್ಯಾಯಾಂಗ, ಇಡಿ, ಐಟಿ ಸೇರಿ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನೂ ನಿಯಂತ್ರಣಕ್ಕೆ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯವರು ಶ್ರೀಮಂತರ ಪರ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಅವರು ಬಡವರು, ದಲಿತರನ್ನು ತುಳಿಯುವ ಗುರಿ ಇಟ್ಟುಕೊಂಡಿದ್ದಾರೆ. ಅಂಥವರ ಪಕ್ಷಕ್ಕೆ ಹೋಗ್ತಿàರಾ ಎಂದು ಕೇಳಿದ ಅವರು, ಕಾಂಗ್ರೆಸ್ ಇದ್ದ ಕಾರಣ ಸಂವಿಧಾನ ಬಂದ ಮೇಲೆ ಮಹಿಳೆಯರಿಗೆ ಓಟಿನ ಅಧಿಕಾರ ಸಿಕ್ಕಿದೆ. ಬಿಜೆಪಿಯವರ ತತ್ವದ ಪ್ರಕಾರ ಆಗಿದ್ದರೆ ಎಲ್ಲೆಡೆ ಮನುಸ್ಮೃತಿ ಜಾರಿಯಾಗುತ್ತಿತ್ತು. ಹೆಣ್ಮಕ್ಕಳಿಗೆ ಯಾವುದೇ ಸ್ಥಾನಮಾನ ಸಿಗುತ್ತಿರಲಿಲ್ಲ ಎಂದರು.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಮೂಲಕ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದರೆ ನರೇಂದ್ರ ಮೋದಿ ಗೇಲಿ ಮಾಡುತ್ತಾರೆ, ನಾನು ಬ್ಯಾಕ್‌ವರ್ಡ್ ಅಂತಾರೆ. ನಾವೇನು ಟಾಟಾ ಬಿರ್ಲಾಗಳಾಗಿದ್ದೆವಾ? ನಾವೂ ಕಷ್ಟಪಟ್ಟೇ ಗದ್ದುಗೆ ಹಿಡಿದಿದ್ದೇವೆ. ರಾಹುಲ್ ಗಾಂಧಿ ಕುಚ್ ನಹೀ ಎಂದು ಮೋದಿ ಹೇಳುತ್ತಾರೆ. ನಮ್ಮಲ್ಲಿ ಶಕ್ತಿ ಇದೆ ಎನ್ನುವುದು ಗೊತ್ತಾಗಿಯೇ ದಿನಾ ಎದ್ದು ಬೆ„ತಾರೆ ಎಂದರು.
ನಾವು ಗ್ಯಾರಂಟಿ ಮಾಡಿದ ಮೇಲೆ ಮೋದಿ ಎಚ್ಚರಾಗಿದ್ದಾರೆ. ನಾನ್ಯಾಕೆ ಕೊಡಬಾರದು ಅಂತ ಶುರು ಮಾಡಿದ್ದಾರೆ. ಈಗಾಗಲೇ ಅವರು ನೀಡಿದ 15 ಲಕ್ಷ, ರೈತರ ಹಣ ಡಬಲ್, ಪ್ರತಿವರ್ಷ 2 ಕೋಟಿ ಉದ್ಯೋಗ ಭರವಸೆಗಳು ಎಲ್ಲಿ ಹೋದವು? ಅವರ ಹಳೆ ಗ್ಯಾರಂಟಿಗಳೆಲ್ಲ ಫೇಲ್ ಆದ ಮೇಲೆ ಈಗ ಮತ್ತೆ ಗ್ಯಾರಂಟಿ ಎನ್ನುತ್ತಿದ್ದಾರೆ. ನಾವೇನು ಸಿದ್ದರಾಮಯ್ಯ ಗ್ಯಾರಂಟಿ ಎನ್ನುತ್ತಿಲ್ಲ, ಕಾಂಗ್ರೆಸ್ ಗ್ಯಾರಂಟಿ ಎನ್ನುತ್ತೇವೆ. ಅವರು ಮೋದಿ ಗ್ಯಾರಂಟಿ ಅಂತಾರೆ. ದೇಶ ಇದ್ದರೆ ತಾನೇ ಮೋದಿ ಎಂದು ಖರ್ಗೆ ಟೀಕಿಸಿದರು.
ಕರಾವಳಿಯವರು ಯಾಕೆ ಹೀಗೆ?ಒಂದೊಮ್ಮೆ ಕರಾವಳಿಯಲ್ಲಿ ಕಾಂಗ್ರೆಸ್ ಜಾರಿಗೆ ತಂದ ಭೂಸುಧಾರಣ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆಯಂತಹ ಯೋಜನೆಗಳ ಭರಪೂರ ಲಾಭವನ್ನು ಪಡೆದ ಮಂದಿಯೇ ಈಗ ಕಾಂಗ್ರೆಸ್‌ನಿಂದ ದೂರ ಸರಿದು ಕೃತಘ್ನರಾಗಿದ್ದಾರೆ, ಏನೂ ಅಭಿವೃದ್ಧಿ ಮಾಡದೆ ಸುಳ್ಳು ಹೇಳುವ ಮೋದಿಗೆ ಜೈಕಾರ ಹಾಕುತ್ತಿದ್ದಾರೆ ಇದು ಸರಿಯಲ್ಲ ಎಂದು ಇದೇ ವೇಳೆ ಖರ್ಗೆ ಕಳವಳ ವ್ಯಕ್ತಪಡಿಸಿದರು. ಕರಾವಳಿಯಲ್ಲಿ ನೀವು ಓಡಾಡುವ ರಸ್ತೆ, ಸೇತುವೆ, ಮಂಗಳೂರು ವಿಮಾನ ನಿಲ್ದಾಣ, ಬಂದರು ನಿರ್ಮಿಸಿದ್ದು ಕಾಂಗ್ರೆಸ್, ನಮ್ಮಿಂದ ಫಲ ಪಡೆದು ನಮ್ಮನ್ನೇ ಮರೆತರೆ ಯಾವ ನ್ಯಾಯ ಎಂದ ಅವರು ಕಾಂಗ್ರೆಸ್ ಸರಕಾರ ಈಗ ನೀಡುತ್ತಿರುವ ಗ್ಯಾರಂಟಿಯನ್ನಾದರೂ ನೆನಪಿಟ್ಟುಕೊಳ್ಳಿ. ನಾವು ಎಲ್ಲ ಗ್ಯಾರಂಟಿಗಳಿಗೆ ಬಜೆಟ್‌ನಲ್ಲೇ ಹಣ ಇಟ್ಟಿದ್ದೇವೆ. ಏನೂ ನೀಡದ ಮನುಷ್ಯನಿಗೆ ಏಕೆ ಜೈಕಾರ ಹಾಕ್ತೀರಿ. ಅನ್ನ ನಮ್ಮದು, ಶಿಕ್ಷಣ ನಮ್ಮದು, ಜೈಕಾರ ಮಾತ್ರ ಮೋದಿಗೆ ಏಕೆ ಎಂದರು.