Advertisement

ನೆರೆ ಸಂತ್ರಸ್ತರ ಮನೆ ನಿರ್ಮಾಣಕ್ಕೆ 66 ಕೋಟಿ ರೂ. ಬಿಡುಗಡೆ

08:22 PM May 18, 2020 | Sriram |

ಬೆಂಗಳೂರು: ರಾಜ್ಯದಲ್ಲಿ ನೆರೆಯಿಂದ ಸಂತ್ರಸ್ತರಾಗಿ ಮನೆ ನಿರ್ಮಿಸಿಕೊಳ್ಳುತ್ತಿರುವವರಿಗೆ ಮೂರನೇ ಕಂತಿನಲ್ಲಿ ಒಂದು ಲಕ್ಷ ರೂ. ನೀಡಲು 66 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

Advertisement

ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಕೋವಿಡ್‌- 19 ವೈರಸ್‌ ನಿಯಂತ್ರಣ ಕಾರ್ಯದ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ನೆರೆ ಸಂತ್ರಸ್ತರು ಮನೆಗಳನ್ನು ನಿರ್ಮಿಸಿಕೊಳ್ಳುವ ಕಾರ್ಯಕ್ಕೆ ಹಿನ್ನಡೆಯಾಗಿದೆ. ಇಟ್ಟಿಗೆ, ಜಲ್ಲಿ, ಕಬ್ಬಿಣ, ಸಿಮೆಂಟ್‌ ಸಿಗದಿರುವ ಜತೆಗೆ ಕೂಲಿ ಕಾರ್ಮಿಕರ ಸಮಸ್ಯೆಯೂ ತಲೆದೋರಿದ್ದು, ಯಾರೂ ಕೆಲಸ ಆರಂಭಿಸಲು ಸಾಧ್ಯವಾಗಿಲ್ಲ. ಹಾಗಾಗಿ ಹಣ ಬಿಡುಗಡೆ ಮಾಡಿರಲಿಲ್ಲ. ಇದೀಗ 66 ಕೋಟಿ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈಗಾಗಲೇ ಮನೆ ನಿರ್ಮಾಣ ಪ್ರಗತಿ ಆಧರಿಸಿ ಮೊದಲ ಹಾಗೂ ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಮೂರನೇ ಕಂತಿನ ಒಂದು ಲಕ್ಷ ರೂ. ನೆರವು ಪಡೆಯಲು ಬಯಸುವವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಬಳಿಕ ನೇರವಾಗಿ ಅವರ ಖಾತೆಗೆ ಒಂದು ಲಕ್ಷ ರೂ. ನೆರವಿನ ಮೊತ್ತ ಜಮೆ ಮಾಡಲಾಗುವುದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next