Advertisement

ಪ್ರಕೃತಿ ವಿಕೋಪ ಪರಿಹಾರಕ್ಕೆ 75 ಕೋಟಿ ಬಿಡುಗಡೆ: ಜಿಲ್ಲಾಧಿಕಾರಿ ರಾಮಚಂದ್ರನ್‌

10:30 AM Aug 21, 2019 | Suhan S |

ಬಾಗಲಕೋಟೆ: ಪ್ರಕೃತಿ ವಿಕೋಪದಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರದಿಂದ ಈವರೆಗೆ ಒಟ್ಟು 75 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ವಿವಿಧ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಮೊದಲು 10 ಕೋಟಿ, ಸೋಮವಾರ 25 ಕೋಟಿ ಹಾಗೂ ಮಂಗಳವಾರ 40 ಕೋಟಿ ಸೇರಿ ಒಟ್ಟು 75 ಕೋಟಿ ರೂ. ಜಿಲ್ಲೆಗೆ ಬಿಡುಗಡೆಯಾಗಿದೆ ಎಂದರು.

ಸೋಮವಾರ ಜಿಲ್ಲೆಯ ಸಂತ್ರಸ್ತರಿಗೆ ತಲಾ 10 ಸಾವಿರ ರೂ.ಗಳಂತೆ ಆರ್‌ಟಿಜಿಎಸ್‌ ಮೂಲಕ ನೇರವಾಗಿ 8500 ಜನ ಸಂತ್ರಸ್ತರ ಬ್ಯಾಂಕ್‌ ಖಾತೆಗಳಿಗೆ 8.5 ಕೋಟಿ ರೂ. ಜಮಾ ಮಾಡಲಾಗಿದೆ. ನಾಳೆ ಪುನಃ 15 ಸಾವಿರ ಹಾಗೂ ಇನ್ನೇರಡು ದಿನದಲ್ಲಿ ಮತ್ತೆ 15 ಸಾವಿರ ಸೇರಿದಂತೆ 30 ಸಾವಿರ ಸಂತ್ರಸ್ತರಿಗೆ ಜಮಾ ಮಾಡಲಾಗುವುದು ಎಂದರು.

ಸಂಪೂರ್ಣ ಪಾರ‌ದರ್ಶಕತೆ: ಪ್ರವಾಹದಿಂದ ಜಿಲ್ಲೆಯ ಸಂತ್ರಸ್ತರ ಬದುಕೇ ತಲ್ಲಣಗೊಂಡ ಹಿನ್ನಲೆಯಲ್ಲಿ ಪ್ರವಾಹ ಪರಿಹಾರವನ್ನು ನುರಿತ ತಂಡಗಳ ಮುಖಾಂತರ ನೇರವಾಗಿ ಆಯಾ ಸಂತ್ರಸ್ತರ ಬ್ಯಾಂಕ್‌ ಖಾತೆಗೆ ಆರ್‌ಟಿಜಿಎಸ್‌ ಮೂಲಕ ಜಮಾ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾರ್ಯವನ್ನು ಪಾರದರ್ಶಕವಾಗಿ ಮಾಡಲಾಗುತ್ತಿದೆ ಎಂದರು.

ತಾತ್ಕಾಲಿಕ ಶೆಡ್‌ ನಿರ್ಮಾಣ: ಪ್ರವಾಹದಿಂದ ಸಂಪೂರ್ಣವಾಗಿ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಶೆಡ್‌ ನಿರ್ಮಿಸಿ ಕೊಡಲಾಗುತ್ತಿದೆ. ಲೋಕೋಪಯೋಗಿ, ನಿರ್ಮಿತಿ ಕೇಂದ್ರ ಹಾಗೂ ಭೂಸೇನಾ ನಿಗಮದಿಂದ ಜಂಟಿಯಾಗಿ ತಾತ್ಕಾಲಿಕ ಶೆಡ್‌ ನಿರ್ಮಿಸುವ ಕಾರ್ಯ ಮಾಡಲಾಗುತ್ತದೆ. ಸಂಪೂರ್ಣ ಮನೆ ಹಾಳಾಗಿರುವ ಹಾಗೂ ತಾತ್ಕಾಲಿಕ ಶೆಡ್‌ಗಳಲ್ಲಿ ವಾಸಿಸುವ ಸಂತ್ರಸ್ತರಿಗೆ ಗರಿಷ್ಠ 10 ತಿಂಗಳ ಅವಧಿಗೆ ಸೀಮಿತಗೊಳಿಸಿ ಮಾಸಿಕ 5 ಸಾವಿರ ರೂ.ಗಳಂತೆ ಬಾಡಿಗೆ ಮೊತ್ತ ನೀಡಲಾಗುವುದು ಎಂದರು.

Advertisement

ಪಟ್ಟದಕಲ್ಲ ಸ್ಥಳಾತರಕ್ಕೆ ಒತ್ತು: ಪ್ರವಾಹದಿಂದ ತತ್ತರಿಸಿದ ಐತಿಹಾಸಿಕ ಸ್ಮಾರಕಗಳ ತಾಣವಾದ ಪಟ್ಟದಕಲ್ಲು ಗ್ರಾಮವನ್ನು ಸ್ಥಳಾಂತರ ಮಾಡಬೇಕಿದ್ದು, ಈ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ಪ್ರಾಣಹಾನಿ ಪರಿಹಾರ ವಿತರಣೆ: ಪ್ರವಾಹದಿಂದ ಇಲ್ಲಿಯವರೆಗೆ 3 ಜನ ಮೃತಪಟ್ಟಿದ್ದು, ತಲಾ 5 ಲಕ್ಷ ರೂ.ಗಳಂತೆ ಒಟ್ಟು 15 ಲಕ್ಷ ರೂ.ಗಳ ಪರಿಹಾಧನ ನೀಡಲಾಗಿದೆ. 150 ಜಾನುವಾರುಗಳು ಸಹ ಮೃತಪಟ್ಟಿದ್ದು, ಒಟ್ಟು 5 ಲಕ್ಷ ಪರಿಹಾರ ಧನ ವಿತರಿಸಲಾಗಿದೆ. ಜಿಲ್ಲೆಯಲ್ಲಿ ಪ್ರವಾಹದಿಂದ 24800 ಮನೆಗಳು ಹಾನಿಗೊಳಪಟ್ಟಿವೆ ಎಂದು ತಿಳಿಸಿದರು.

• ಮನೆ ಕಟ್ಟಿಕೊಳ್ಳಲು 5 ಲಕ್ಷ ;10 ತಿಂಗಳು ಬಾಡಿಗೆ ಹಣ

• ಸಂತ್ರಸ್ತರು ಎದೆಗುಂದಬೇಕಿಲ್ಲ

• ಪೂರ್ಣ ಬಿದ್ದ ಮನೆಗೆ 5 ಲಕ್ಷ ಪರಿಹಾರ

Advertisement

Udayavani is now on Telegram. Click here to join our channel and stay updated with the latest news.

Next