ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಗಾಗಿ ಸಮ್ಮಿಶ್ರ ಸರ್ಕಾರ 80 ಕೋಟಿ ರೂ. ಮಂಜೂರು ಮಾಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಪ್ರಗತಿ ಯಲ್ಲಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿ.ಮುನಿಯಪ್ಪ ಹೇಳಿದರು.
ನಗರದ ದಿಬ್ಬೂರಹಳ್ಳಿ ರಸ್ತೆಯಲ್ಲಿ 1.55 ಕೋಟಿ ವೆಚ್ಚದಲ್ಲಿ ಕೋರ್ಟ್ ಮುಂಭಾಗದ ಮುಖ್ಯ ರಸ್ತೆಯ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಅವರು, ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಲಾಗಿದ್ದು, ನಗರೋತ್ಥಾನ ಇನ್ನಿತರೆ ಯೋಜನೆಗಳಡಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಅಧಿಕಾರಿಗಳಿಗೆ ಸೂಚನೆ: ಕ್ಷೇತ್ರದಲ್ಲಿ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೊಳಿಸುವ ಜೊತೆಗೆ ಅಂತರ್ ಜಿಲ್ಲಾ ಹೆದ್ಧಾರಿಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳ ಲಾಗಿದೆ. ಶಿಡ್ಲಘಟ್ಟ-ದಿಬ್ಬೂರಹಳ್ಳಿ ಮಾರ್ಗದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಈಗಾಗಲೇ ಚಾಲನೆ ನೀಡ ಲಾಗಿದ್ದು, ಹೆಚ್ಕ್ರಾಸ್‌ನಿಂದ ವಿಜಯಪುರ ಮಾರ್ಗ ದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ 30 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪಕ್ಷಾತೀತವಾಗಿ ಬರಗಾಲ ಎದುರಿಸಿ: ತಾಲೂಕಿನಲ್ಲಿ ತೀವ್ರ ಬರಗಾಲ ಕಾಡುತ್ತಿರುವುದರಿಂದ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವುದು ಕಷ್ಟ ವಾಗುತ್ತಿದ್ದು, ನಗರದಲ್ಲಿ ಕುಡಿಯುವ ನೀರಿಗಾಗಿ ಕೊರೆದಿರುವ 21 ಕೊಳವೆಬಾವಿಗಳಲ್ಲಿ ಕೇವಲ 3 ರಲ್ಲಿ ಮಾತ್ರ ನೀರು ಲಭಿಸಿದೆ. 19 ಕೊಳವೆ ಬಾವಿಗಳಲ್ಲಿ ನೀರು ಲಭಿಸಿಲ್ಲ. ತಾಲೂಕಿನಾದ್ಯಂತ ಬರಗಾಲದ ಪರಿಸ್ಥಿತಿಯಲ್ಲಿ ಮಿತನೀರು ಬಳಕೆ ಮಾಡುವ ಜೊತೆಗೆ ಖಾಸಗಿ ಕೊಳವೆಬಾವಿಯಿಂದ ನೀರು ಪೂರೈಕೆ ಮಾಡಲು ಮೂರು ತಿಂಗಳ ಕಾಲ ಕೊಳವೆಬಾವಿಗಳಿಂದ ನೀರು ಕೊಟ್ಟು ಸಹಕಾರ ನೀಡಬೇಕೆಂದು ಮನವಿ ಮಾಡಿ ದರು.
ಸರ್ಕಾರ ನಿದ್ದೆ ಮಾಡುತ್ತಿಲ್ಲ: ರಾಜ್ಯದಲ್ಲಿ ಸಮಿಶ್ರ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಟೀಕಿಸುವ ವಿರೋಧ ಪಕ್ಷದ ಮುಖಂಡರ ವಿರುದ್ಧ ನಡೆಸಿದ ಶಾಸಕರು, ಸರ್ಕಾರ ವೇನು ನಿದ್ದೆ ಮಾಡುತ್ತಿಲ್ಲ. ಕ್ಷೇತ್ರದಲ್ಲಿ ಕೋಟ್ಯಂತರ ರೂ.ಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.
ಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಡಾಲ್ಫಿನ್ ನಾಗರಾಜ್, ಜಿಪಂ ಮಾಜಿ ಸದಸ್ಯ ಎನ್.ಮುನಿಯಪ್ಪ, ಮುಖಂಡರಾದ ಅಮೀರ್ ಜಾನ್, ಸೈಯದ್ ಅಲ್ತಾಫ್ ಹುಸೇನ್, ಅಕ್ರಮ್ ಪಾಷ, ಸನಾವುಲ್ಲಾ, ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಲೋಕೋಪಯೋಗಿ ಇಲಾಖೆಯ ಎಇಇ ವಿನೋದ್, ಸಿಪಿಐ ಆನಂದ್, ಮೊಹ್ಮದ್ ಹಫೀಜ್, ಕಾಂಗ್ರೆಸ್ ಮೈನಾರಿಟಿ ಘಟಕದ ಅಧ್ಯಕ್ಷ ಅಮ್ಜದ್ ನವಾಜ್, ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಶ್ರೀನಾಥ್, ತಿಮ್ಮನಾಯಕನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಆನಂದ್ ಇದ್ದರು.