Advertisement

ಕೇರಳದಲ್ಲಿ ಆರೆಸ್ಸೆಸ್‌ ಕಾರ್ಯಕರ್ತನ ಹತ್ಯೆ

06:05 AM Nov 13, 2017 | Team Udayavani |

ಗುರುವಾಯೂರು: ಕೇರಳದ ದೇಗುಲ ನಗರ ಗುರುವಾಯೂರಿನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತನನ್ನು ಇರಿದು ಹತ್ಯೆ ಮಾಡಲಾಗಿದೆ. ಮೂರು ವರ್ಷಗಳ ಹಿಂದೆ ಸಿಪಿಎಂ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಆತನನ್ನು ಬಂಧಿಸಲಾಗಿತ್ತು.

Advertisement

ಆನಂದನ್‌ (23) ಹತ್ಯೆಯಾದ ಯುವಕ. ಸದ್ಯ ಆತ ಜಾಮೀನಿನ ಮೇಲೆ ಬಿಡು ಗಡೆಯಾಗಿದ್ದ. ಗುರುವಾಯೂರಿನ ನನ್ಮೆàನಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಕಿಡಿಗೇಡಿಗಳು ಥಳಿಸಿ, ಮಾರಕ ಆಯುಧಗಳಿಂದ ಇರಿದು ಹತ್ಯೆಗೈದಿದ್ದಾರೆ. ಗಂಭೀರವಾಗಿ ಗಾಯಗೊಂಡ ಆನಂದನ್‌ನನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದಾಗಲೇ ಕೊನೆಯುಸಿರೆಳೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಖಂಡಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ  ಅಮಿತ್‌ ಶಾ ಟ್ವೀಟ್‌ ಮಾಡಿದ್ದು, ಪಕ್ಷ ಮತ್ತು ಆರ್‌ಎಸ್‌ಎಸ್‌ ಕಾರ್ಯ ಕರ್ತರ ಮೇಲೆ ಸಿಪಿಎಂನಿಂದ ಹಲ್ಲೆ, ಕೊಲೆ ಯತ್ನ ಮುಂದುವರಿದೆ. ರಾಜಕೀಯ ಹತ್ಯೆ ನಡೆಸುವವರ ಬಗ್ಗೆ ರಕ್ಷಣೆ ನೀಡುವ ವ್ಯವಸ್ಥೆ ದೇಶದಲ್ಲೇ ಮೊದಲು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹತ್ಯೆ ನಡೆದ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲಾಗದು. ತನಿಖೆ ನಡೆಯುತ್ತಿದ್ದು, ಪ್ರಬಲ ಸುಳಿವು ಸಿಕ್ಕಿದೆ. ಅದಕ್ಕೆ ರಾಜಕೀಯ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಹೇಳಲು ಸಾಧ್ಯವಾಗದು ಎಂದಿದ್ದಾರೆ.

ಸಿಪಿಎಂ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿ, ಆರ್‌ಎಸ್‌ಎಸ್‌ ಕಾರ್ಯಕರ್ತರು ಹಿಂಸಾತ್ಮಕ ಚಟು ವಟಿಕೆಗಳಲ್ಲಿ ನಿರತರಾಗಿದ್ದಾರೆ. ಪಕ್ಷದ ನಾಯಕತ್ವ ಮತ್ತು ಕಾರ್ಯಕರ್ತರು ಯಾವುದೇ ರೀತಿಯಲ್ಲಿ ರಾಜಕೀಯ ಹತ್ಯೆಗಳಲ್ಲಿ ಭಾಗಿಯಾಗಿಲ್ಲ ಎಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next