ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಸೇರಿದಂತೆ ಹಿರಿಯ ನಾಯಕರು ಭಾಗವಹಿಸುವುದಿಲ್ಲ ಎಂದು ಬುಧವಾರ ಕಾಂಗ್ರೆಸ್ ಪಕ್ಷ ಪ್ರಕಟಣೆ ತಿಳಿಸಿದೆ.
ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.ಆದರೆ ಇದೀಗ ಕಾಂಗ್ರೆಸ್ ಈ ಆಹ್ವಾನ ತಿರಸ್ಕರಿಸಿದೆ.
ಅಯೋಧ್ಯೆಯಲ್ಲಿ ಜನವರಿ 22ರಂದು ಭವ್ಯ ರಾಮಮಂದಿರ ಲೋಕಾರ್ಪಣೆಗೊಳ್ಳಲಿದೆ.
ಶ್ರೀರಾಮನನ್ನು ನಮ್ಮ ದೇಶದಲ್ಲಿ ಲಕ್ಷಾಂತರ ಜನರು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ.
ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.