Advertisement

ಡಿಸಿ ಆದೇಶಕ್ಕೆ ಡೋಂಟ್ ಕೇರ್, ಕೇರಳ ಶಾಲೆಯಲ್ಲಿ ಭಾಗವತ್ ಧ್ವಜಾರೋಹಣ!

02:18 PM Aug 15, 2017 | Sharanya Alva |

ತಿರುವನಂತಪುರಂ: ಜಿಲ್ಲಾಡಳಿತದ ಆದೇಶವನ್ನು ದಿಕ್ಕರಿಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಂಗಳವಾರ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಸರ್ಕಾರಿ ಅನುದಾನಿತ ಶಾಲೆಯೊಂದರಲ್ಲಿ ಧ್ವಜಾರೋಹಣ ನೆರವೇರಿಸಿದ್ದು, ಶಾಲೆಯ ವಿರುದ್ಧ ದೂರು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸರ್ಕಾರಿ ಅನುದಾನಿತ ಶಾಲೆಯಲ್ಲಿ ಮಿಸ್ಟರ್ ಭಾಗವತ್ ಯಾವುದೇ ಕಾರಣಕ್ಕೂ ಧ್ವಜಾರೋಹಣ ನೆರವೇರಿಸಬಾರದು ಎಂದು ಪಾಲಕ್ಕಾಡ್ ಜಿಲ್ಲೆಯ ಜಿಲ್ಲಾಧಿಕಾರಿ ಮೇರಿ ಕುಟ್ಟಿ ಅವರು ಶಾಲೆಗೆ ಲಿಖಿತ ಆದೇಶ ನೀಡಿದ್ದರು. ಶಾಲೆಯಲ್ಲಿ ಅಧಿಕಾರಿ ವರ್ಗದವರು ಅಥವಾ ಶಾಸಕರಂತಹ ಜನಪ್ರತಿನಿಧಿಗಳು ಮಾತ್ರ ಧ್ವಜಾರೋಹಣ ನೆರವೇರಿಸಬೇಕೆಂದು ಡಿಸಿ ಆದೇಶದಲ್ಲಿ ತಿಳಿಸಿದ್ದರು ಎಂದು ವರದಿ ಹೇಳಿದೆ.

ಏತನ್ಮಧ್ಯೆ ಭಾಗವತ್ ಧ್ವಜಾರೋಹಣ ವಿವಾದ ಕುರಿತಂತೆ ಬಿಜೆಪಿ ಹಾಗೂ ಆರ್ ಎಸ್ಎಸ್, ರಾಷ್ಟ್ರಧ್ವಜವನ್ನು ಹಾರಿಸಲು ಪ್ರತಿಯೊಬ್ಬರಿಗೂ ಹಕ್ಕಿದೆ ಎಂದು ಪ್ರತಿಕ್ರಿಯಿಸಿದೆ.

ಜಿಲ್ಲಾಧಿಕಾರಿಯವರ ಆದೇಶ ಉಲ್ಲಂಘಿಸಲಾಗಿಲ್ಲ. ಆಡಳಿತ ಮಂಡಳಿ ಅಧಿಕಾರಿಗಳ ಮತ್ತು ಮುಖ್ಯೋಪಾಧ್ಯಾಯರ ಹಾಜರಿಯಲ್ಲಿ ಪ್ರಮುಖ ವ್ಯಕ್ತಿಯೊಬ್ಬರು ಧ್ವಜಾರೋಹಣ ನೆರವೇರಿಸಬೇಕು ಎಂಬುದಾಗಿ ಆದೇಶದಲ್ಲಿ ಉಲ್ಲೇಖಿಸಲಾಗಿತ್ತು’ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next