Advertisement

ಅಯೋಧ್ಯೆಗೆ ಆರ್‌ಎಸ್‌ಎಸ್‌ ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌ ಭೇಟಿ

11:30 PM Oct 19, 2021 | Team Udayavani |

ಅಯೋಧ್ಯೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥರಾಗಿರುವ ಮೋಹನ್‌ ಭಾಗವತ್‌, 2 ದಿನಗಳ ಅಯೋಧ್ಯೆ ಪ್ರವಾಸ ಕೈಗೊಂಡಿದ್ದು, ಮಂಗಳವಾರದಂದು ನಗರಕ್ಕೆ ಬಂದಿಳಿದಿದ್ದಾರೆ.

Advertisement

ಅವರು ಕರಸೇವಕ್‌ಪುರಂನಲ್ಲಿ ನಡೆಯಲಿರುವ ಆರ್‌ಎಸ್‌ಎಸ್‌ ದೈಹಿಕ ತರಬೇತಿ ವರ್ಕ್‌ಶಾಪ್‌ನಲ್ಲಿ ಭಾಗವಹಿಸಲಿದ್ದಾರೆ. ಹಾಗೆಯೇ ರಾಮ ಜನ್ಮಭೂಮಿ ಮತ್ತು ಹನುಮಗರಿ ದೇಗುಲಕ್ಕೂ ಭೇಟಿ ನೀಡಲಿದ್ದಾರೆ.

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಲಿದ್ದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರು ಮತ್ತು ಪದಾಧಿಕಾರಿಗಳನ್ನು ಭೇಟಿ ಮಾಡಿ, ಮಾತನಾಡಲಿದ್ದಾರೆ.

ಇದನ್ನೂ ಓದಿ:100ಕೋಟಿ ಸನಿಹಕ್ಕೆ ಲಸಿಕೆ ಅಭಿಯಾನ :ಹೆಚ್ಚು ಲಸಿಕೆ ನೀಡಿದ ರಾಜ್ಯಗಳಲ್ಲಿ ಕರ್ನಾಟಕಕ್ಕೂ ಸ್ಥಾನ

ಭಾಗವತ್‌ ಎರಡು ದಿನಗಳ ಕಾಲ ಸ್ಥಳೀಯ ಆರ್‌ಎಸ್‌ಎಸ್‌ ಕಚೇರಿಯಲ್ಲಿ ತಂಗಲಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್‌ ಭದ್ರತೆ ಏರ್ಪಡಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next