Advertisement

ದೇಶದಲ್ಲಿ ಮತ್ತೆ ಗುರುಕುಲ ವ್ಯವಸ್ಥೆ ಜಾರಿಯಾಗಲಿ: ಸುರೇಶ್‌ ಭಯ್ಯಾಜಿ

09:49 AM Feb 12, 2020 | Hari Prasad |

ಪಣಜಿ: ದೇಶದಲ್ಲಿ ಮತ್ತೆ ಗುರುಕುಲ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಪುನರುಜ್ಜೀವನಗೊಳಿಸಬೇಕು ಎಂದು ಆರ್‌ಎಸ್‌ಎಸ್‌ ಪ್ರಧಾನ ಕಾರ್ಯದರ್ಶಿ ಸುರೇಶ್‌ ಭಯ್ಯಾಜಿ ಹೇಳಿದ್ದಾರೆ. ಭಾನುವಾರ ಗೋವಾದ ದೋನಾ ಪಾವ್ಲಾದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇಂಥ ಪ್ರಯೋಗಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಸಲಹೆ ಮಾಡಿದ್ದಾರೆ.

Advertisement

ದೇಶದ ಪ್ರತಿಯೊಂದು ಶಾಲೆಗಳಲ್ಲಿಯೂ ಸಂಸ್ಕೃತ ಕಲಿಕೆಗೆ ಅವಕಾಶ ಮಾಡಿಕೊಡಬೇಕು. ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ಭಾರತವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಾಗಿದ್ದರೆ ಸಂಸ್ಕೃತದ ಅಧ್ಯಯನ ಬೇಕು ಎಂದಿದ್ದಾರೆ.

ಬ್ರಿಟಿಷರು ಜಾರಿ ಮಾಡಿದ್ದ ಶಿಕ್ಷಣ ವ್ಯವಸ್ಥೆಯನ್ನು ಈಗ ದೇಶಾದ್ಯಂತ ಅನುಸರಿಸಲಾಗುತ್ತದೆ. ಈಗ ಕೇಂದ್ರ ಸರ್ಕಾರ ಅದರಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಕೆಲವೇ ಕೆಲವು ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರಯೋಗ ನಡೆಸಿವೆ ಎಂದಿದ್ದಾರೆ ಭಯ್ಯಾಜಿ ಜೋಶಿ

Advertisement

Udayavani is now on Telegram. Click here to join our channel and stay updated with the latest news.

Next