Advertisement

ಆರೆಸ್ಸೆಸ್‌ ಹಿರಿಯ ಪ್ರಚಾರಕ ಜಯದೇವ ವಿಧಿವಶ

03:45 AM Feb 21, 2017 | |

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಹಿರಿಯ ಪ್ರಚಾರಕ ಮೈ.ಚ.ಜಯದೇವ (85) ಸೋಮವಾರ ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಲ್ಲಿ ನಿಧನರಾದರು.

Advertisement

ಅವಿವಾಹಿತರಾಗಿದ್ದ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಸಾಗರ್‌ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಜಯದೇವ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ
ಚಾಮರಾಜಪೇಟೆಯಲ್ಲಿರುವ ಸಂಘದ ಕಚೇರಿಗೆ ತಂದು ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಮಂಗಳವಾರ ಪಾರ್ಥಿವ ಶರೀರವನ್ನು ಅವರ ಹುಟ್ಟೂರು ಮೈಸೂರಿಗೆ ಕೊಂಡೊಯ್ದು ಅಲ್ಲಿನ ರುದ್ರಭೂಮಿಯಲ್ಲಿ ಸಂಜೆ 3 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ.ರಾಜ್ಯಪಾಲ. ವಿ.ಆರ್‌.ವಾಲಾ, ಆರೆಸ್ಸೆಸ್‌ ಹಿರಿಯ ಪ್ರಚಾರಕ ಚಂದ್ರಶೇಖರ ಭಂಡಾರಿ, ಎನ್‌.ಸಿ.ಶೇಷಾದ್ರಿ (ಶೇಷು), ಪ್ರಾಂತೀಯ ಕಾರ್ಯಕಾರಿಣಿ ಮಂಡಳಿ ಸದಸ್ಯ ವೈ.ಕೆ.ರಾಘವೇಂದ್ರರಾವ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ರಾಷ್ಟ್ರೋತ್ಥಾನ ಪರಿಷತ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಹೆಗ್ಡೆ, ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ, ಕ್ಷೇತ್ರ ಸಂಘಚಾಲಕ ವಿ.ನಾಗರಾಜ್‌ ಸೇರಿ ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಸಂಘದಲ್ಲಿ 67 ವರ್ಷಗಳ ಸೇವೆ
ಆರ್‌ಎಸ್‌ಎಸ್‌ನ ಕುಶಲ ಸಂಘಟಕ ಎಂದೇ ಜನಪ್ರಿಯರಾಗಿದ್ದ ಹಿರಿಯ ಪ್ರಚಾರಕ ಮೈಸೂರು ಚನ್ನಬಸಪ್ಪ ಜಯದೇವ (ಮೈ.
ಚ.ಜಯದೇವ) 1932ರ ಫೆ. 18ರಂದು ಮೈಸೂರಿನಲ್ಲಿ ಜನಿಸಿದರು. ಮೈಸೂರಿನಲ್ಲಿ ಬಿಎಸ್ಸಿ ಪದವಿ ಪೂರೈಸಿದ ನಂತರ ಕಾನೂನು ವ್ಯಾಸಂಗ ಮಾಡಿದ ಅವರು, 1950ರ ದಶಕದಲ್ಲಿ ಆರ್‌ಎಸ್‌ಎಸ್‌ ವಿಚಾರಧಾರೆಯತ್ತ ಆಕರ್ಷಿತರಾಗಿ ಸಕ್ರಿಯ ಕಾರ್ಯಕರ್ತರಾಗಿ
ಗುರುತಿಸಿಕೊಂಡರು. 1960ರಲ್ಲಿ ಆರ್‌ಎಸ್‌ಎಸ್‌ ಬೆಂಗಳೂರು ಮಹಾನಗರ ಕಾರ್ಯವಾಹ ಜವಾಬ್ದಾರಿ ಸ್ವೀಕರಿಸಿ 1974ರ ತನಕ ಸುದೀರ್ಘ‌ ಸೇವೆ ಸಲ್ಲಿಸಿದ್ದರು 1965ರಲ್ಲಿ ರಾಷ್ಟ್ರೋತ್ಥಾನ ಪರಿಷತ್‌ ಸ್ಥಾಪನೆಯಲ್ಲಿ ಮೈ.ಚ.ಜಯದೇವ ಮಹತ್ವದ ಪಾತ್ರ ವಹಿಸಿದ್ದರು. ಇದೀಗ 50 ವರ್ಷ ಪೂರೈಸಿರುವ ರಾಷ್ಟ್ರೋತ್ಥಾನ ಪರಿಷತ್‌ನ ಸಮಗ್ರ ವಿಕಾಸದ ಎಲ್ಲ ಹಂತಗಳಲ್ಲಿಯೂ ತಮ್ಮನ್ನು ತೊಡಗಿ
ಸಿಕೊಂಡಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬೆಂಗಳೂರಿನ ಬಸವನ ಗುಡಿಯಲ್ಲಿ ಮೊದಲ ತಂಡದಲ್ಲಿ ಸತ್ಯಾಗ್ರಹ ಮಾಡಿ 1975ರ ನವೆಂಬರ್‌ ನಲ್ಲಿ ಜೈಲುವಾಸ ಅನುಭವಿಸಿದ ಅವರು, 1977ರ   ಮಾ. 22ರಂದು ಯಾದವರಾವ್‌ ಜೋಶಿ ಅವರೊಂ
ದಿಗೆ ಬಿಡುಗಡೆಯಾದರು. ರಾಷ್ಟ್ರೀಯ ನಾಯಕರು, ಎಲ್ಲಾ ಪಕ್ಷಗಳ ಮುಖಂಡರು, ಸ್ವಾಮೀಜಿಗಳೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next