Advertisement

ದ್ವೇಷಪೂರಿತ ಭಾಷಣ ವಿರುದ್ಧ ಕ್ರಮ ಅಗತ್ಯ: ಆರ್‌ಎಸ್‌ಎಸ್‌

08:08 PM Feb 03, 2022 | Team Udayavani |

ನವದೆಹಲಿ: ದ್ವೇಷ ಪೂರಿತ ಭಾಷಣ ಮಾಡುವವರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆರ್‌ಎಸ್‌ಎಸ್‌ನ ಹಿರಿಯ ನಾಯಕ ಇಂದ್ರೇಶ್‌ ಕುಮಾರ್‌ ಒತ್ತಾಯಿಸಿದ್ದಾರೆ.

Advertisement

“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಹರಿದ್ವಾರದ ಧರ್ಮಸಂಸದ್‌ ಸೇರಿದಂತೆ ಹಲವು ವೇದಿಕೆಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾತ್ಮವಾಗಿ ಮಾತನಾಡಿದ್ದನ್ನು ಸಮರ್ಥಿಸಲು ಸಾಧ್ಯವೇ ಇಲ್ಲ. ಅವರ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಹಿಂದುತ್ವವಾದಿಗಳೇ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದರು ಎಂಬ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರ ಹೇಳಿಕೆಗೆ ಆಕ್ಷೇಪ ಮಾಡಿದ ಅವರು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರ ಮಾತು ಕೂಡ ದ್ವೇಷಪೂರಿತವಾಗಿದೆ ಎಂದರು.

ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ದ್ವೇಷಪೂರಿತ ಭಾಷಣಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸಮುದಾಯ-ಜಾತಿಗಳ ನಡುವೆ ಭಾÅತೃತ್ವ ಸೃಷ್ಟಿಸುವ ವ್ಯವಸ್ಥೆಯತ್ತ ಮನಸ್ಸು ಮಾಡಬೇಕು ಎಂದು ಇಂದ್ರೇಶ್‌ ಕುಮಾರ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next