Advertisement
ಆರೆಸ್ಸೆಸ್ ಕಚೇರಿಯಲ್ಲಿ ನಿಯೋಜಿಸಲ್ಪಟ್ಟಿದ್ದ ಭದ್ರತಾ ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ಕಳುಹಿಸುವ ಉದ್ದೇಶದಿಂದ ವಾಪಸ್ ಪಡೆಯುತ್ತಿದ್ದೇವೆ ಎಂದು ಕಮಲ್‌ನಾಥ್ ಸರ್ಕಾರ ಸೋಮವಾರ ಘೋಷಿಸಿತ್ತು. ಆದರೆ, ಅಚ್ಚರಿಯೆಂಬಂತೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಭೋಪಾಲ್ ಕ್ಷೇತ್ರದ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರೇ ಸರ್ಕಾರದ ಈ ನಿರ್ಧಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಆರೆಸ್ಸೆಸ್ ಕಚೇರಿಗೆ ನೀಡಿದ್ದ ಭದ್ರತೆ ವಾಪಸ್ ಪಡೆಯುವುದು ಸರಿಯಲ್ಲ. ಕೂಡಲೇ ಕಚೇರಿಗೆ ಹೆಚ್ಚುವರಿ ಭದ್ರತೆ ನೀಡುವಂತೆ ಸಿಎಂ ಕಮಲ್‌ನಾಥ್‌ರನ್ನು ಕೋರಿಕೊಳ್ಳುತ್ತೇನೆ’ ಎಂದಿದ್ದರು. ಬಿಜೆಪಿಯ ಕೆಲವು ನಾಯಕರೂ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಕೊನೆಗೆ ಕಮಲ್‌ನಾಥ್ ಅವರು ತಮ್ಮ ನಿರ್ಧಾರವನ್ನು ವಾಪಸ್ ಪಡೆದರು. Advertisement
ಆರೆಸ್ಸೆಸ್ ಕಚೇರಿ ಭದ್ರತೆ: ಮ.ಪ್ರ. ಸರ್ಕಾರ ಗೊಂದಲ
11:56 PM Apr 02, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.