Advertisement

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

11:01 PM Nov 18, 2024 | Team Udayavani |

ನವದೆಹಲಿ:ಆರ್‌ಎಸ್‌ಎಸ್‌ ವಿರುದ್ಧ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ, ಗೀತ ರಚನೆಕಾರ ಜಾವೇದ್‌ ಅಖ್ತರ್‌ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ಮುಂಬೈ ಕೋರ್ಟ್‌ ರದ್ದುಪಡಿಸಿದೆ.

Advertisement

ದೂರುದಾರರು ಕೇಸು ಹಿಂಪಡೆದಿರುವ ಕಾರಣ ನ್ಯಾಯಾಲಯವು ಈ ಆದೇಶ ನೀಡಿದೆ. ಟಿವಿ ಸಂದರ್ಶನವೊಂದರಲ್ಲಿ ಆರ್‌ಎಸ್‌ಎಸ್‌ ಕುರಿತು ಜಾವೇದ್‌ ಆಕ್ಷೇ ಪಾರ್ಹ ಹೇಳಿಕೆ ನೀಡಿದ್ದು, ಹಿಂದೂ ಪರ ಹೋರಾಟಗಾರರನ್ನು ತಾಲಿಬಾನ್‌ಗೆ ಹೋಲಿಸಿದ್ದಾರೆ ಎಂದು ಆರೋಪಿಸಿ 2021ರಲ್ಲಿ ವಕೀಲರೊಬ್ಬರು ಜಾವೇದ್‌ ವಿರುದ್ಧ ಪ್ರಕರಣ ದಾಖಲಿಸಿದ್ದರು.

 

 

Advertisement

Udayavani is now on Telegram. Click here to join our channel and stay updated with the latest news.

Next