Advertisement

ಆರ್ ಎಸ್ಎಸ್ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್: ಸವಾಲಿನ ಪ್ರಶ್ನೆಗಳ ಸುರಿಮಳೆ

06:07 PM May 28, 2022 | Team Udayavani |

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ವಿರುದ್ಧ ಶನಿವಾರ ಸರಣಿ ಟ್ವೀಟ್ ಮಾಡಿ, ಹಲವು ಪ್ರಶ್ನೆಗಳನ್ನು ಮುಂದಿಟ್ಟು ಮತ್ತೆ ಆಕ್ರೋಶ ಹೊರ ಹಾಕಿದ್ದಾರೆ.

Advertisement

ನಾನು ಪ್ರಶ್ನೆ ಮಾಡಿದ್ದು ಆರ್ ಎಸ್ ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ಬಿಜೆಪಿಯ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ? ಆರ್ ಎಸ್ ಎಸ್ ನಾಯಕರು ಓದು-ಬರಹ ಗೊತ್ತಿಲ್ಲದವರೇ? ಅವರೇ ಉತ್ತರಿಸಲಿ.ಹಿಂದೂ ಧರ್ಮದ ರಕ್ಷಣೆಗಾಗಿಯೇ ಅವತಾರ ಎತ್ತಿ ಬಂದಂತೆ ಮಾತನಾಡುತ್ತಿರುವ ಆರ್.ಎಸ್.ಎಸ್ ನಾಯಕರು ಬೆಂಬಲಿಸುತ್ತಿರುವುದು ಮಾತ್ರ ಬಿಜೆಪಿ ಎಂಬ ರಾಜಕೀಯ ಪಕ್ಷವನ್ನು.ಯಾಕೆ ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೇ? ಬಿಜೆಪಿಯಲ್ಲಿರುವವರು ಮಾತ್ರ ಹಿಂದೂಗಳೆಂದು ಯಾವ ಆಧಾರದಲ್ಲಿ ಆರ್.ಎಸ್.ಎಸ್ ತೀರ್ಮಾನಿಸಿದೆ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು ಹೊಂದಿರಬೇಕಾದ ಅರ್ಹತೆಗಳೇನು? ಎಂದು ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಆರ್.ಎಸ್.ಎಸ್ ಪ್ರತಿಪಾದಿಸುವ ಹಿಂದೂ ಧರ್ಮದಲ್ಲಿ ದಲಿತರು, ಹಿಂದುಳಿದ ಜಾತಿಗಳ ಸ್ಥಾನಮಾನ ಏನು? ಆರ್.ಎಸ್.ಎಸ್ ಯಾಕೆ ಮೀಸಲಾತಿ, ಭೂಸುಧಾರಣೆಯನ್ನು ವಿರೋಧಿಸುತ್ತಾ ಬಂದಿದೆ? ಇದರ ಫಲಾನುಭವಿಗಳು ಹಿಂದುಗಳಲ್ಲವೇ? ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಆಗಲು 40% ಕಮಿಷನ್ ಹೊಡೆಯಬೇಕಾ? ಬ್ಲೂ ಫಿಲ್ಮ್ ನೋಡಬೇಕಾ? ಗಣಿ ಲೂಟಿ ಮಾಡಬೇಕಾ? ಚೆಕ್ ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ? ರೇಪ್ ಮಾಡಬೇಕಾ? ಏನು ಮಾಡಬೇಕು? ಹೇಳಿಬಿಡಿ ಎಂದು ವ್ಯಂಗ್ಯವಾಗಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಹಸಿದ ಹೊಟ್ಟೆಗೆ ಅನ್ನ, ಎಳೆಯ ಮಕ್ಕಳಿಗೆ ಹಾಲು, ರೈತರ ಬೆಳೆಗೆ ನ್ಯಾಯದ ಬೆಲೆ, ಯುವಜನರಿಗೆ ಉದ್ಯೋಗ, ಅವಕಾಶ ವಂಚಿತರಿಗೆ ಸಮಾನ ಅವಕಾಶ, ಜಾತಿ ತಾರತಮ್ಯದಿಂದ ಅನ್ಯಾಯಕ್ಕೀಡಾದವರಿಗೆ ಸಾಮಾಜಿಕ ನ್ಯಾಯ.. ಹಿಂದೂ ಆಗಲು ಇಷ್ಟು ಅರ್ಹತೆ ಸಾಲದೇ? ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ತನ್ನ ಸಂಘಟನೆಯ ಪದಾಧಿಕಾರಗಳನ್ನೆಲ್ಲಾ ಯಾಕೆ ಒಂದು ಜಾತಿಗೆ ಮೀಸಲಿಟ್ಟಿದೆ? ಆರ್.ಎಸ್.ಎಸ್ ನ ಪದಾಧಿಕಾರಿಗಳಲ್ಲಿ ಎಷ್ಟು ಮಂದಿ ದಲಿತರು, ಹಿಂದುಳಿದ ಜಾತಿಯವರಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ರಾಷ್ಟ್ರಕವಿಗೆ ಅವಮಾನ : ರೋಹಿತ್ ಚಕ್ರತೀರ್ಥ, ಲಕ್ಷ್ಮಣ್ ಆಕಾಶೆ ವಿರುದ್ದ ಕ್ರಮಕ್ಕೆ ಆಗ್ರಹ

Advertisement

ಆರ್.ಎಸ್.ಎಸ್ ದೃಷ್ಟಿಯಲ್ಲಿ ಹಿಂದೂ ಧರ್ಮದ ವ್ಯಾಖ್ಯಾನ ಏನು? ಹಿಂದೂ ಆಗಲು ಹಿಂದೂ ತಂದೆ-ತಾಯಿ ಹೊಟ್ಟೆಯಲ್ಲಿ ಹುಟ್ಟಿದರೆ ಸಾಕಾ? ಇಲ್ಲವೇ ಬಿಜೆಪಿ ಎಂಬ ರಾಜಕೀಯ ಪಕ್ಷದ ಸದಸ್ಯರಾಗಬೇಕಾ?ಹಿಂದೂಗಳೆಲ್ಲ ಒಂದು ಎಂದು ಕಂಠಶೋಷಣೆ ಮಾಡುತ್ತಿರುವ ಆರ್.ಎಸ್.ಎಸ್ ಯಾಕೆ ಹಿಂದೂ ಧರ್ಮದ ಅನಿಷ್ಠಗಳಾದ ಅಸ್ಪೃಶ್ಯತೆ, ಅಸಮಾನತೆ, ಮೂಢ ನಂಬಿಕೆ, ಕಂದಾಚಾರಗಳ ಬಗ್ಗೆ ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮದೊಳಗಿನ ಅನಿಷ‍್ಠಗಳನ್ನು ಪ್ರಶ್ನಿಸಿದ ಮಾತ್ರಕ್ಕೆ ನನ್ನಂತಹವರು ಹಿಂದೂ ವಿರೋಧಿ ಆಗುವುದಾದರೆ? ಇದೇ ಕೆಲಸ ಮಾಡಿರುವ ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರುಗಳನ್ನು ಏನೆಂದು ಕರೆಯುತ್ತೀರಿ? ಆರ್.ಎಸ್.ಎಸ್ ನಾಯಕರೇ ನಿಮ್ಮ ಆತ್ಮವನ್ನು ಸಾಕ್ಷಿಯಾಗಿಟ್ಟುಕೊಂಡು ಹೇಳಿಬಿಡಿ.ನಿಮ್ಮ ನಿಷ್ಠೆ ರಾಷ್ಟ್ರಧ್ವಜಕ್ಕೋ? ಭಗವಾ ಧ್ವಜಕ್ಕೋ? ನಿಮ್ಮ ನಿಷ್ಠೆ ಸಂವಿಧಾನಕ್ಕೋ ? ಮನುಸ್ಮೃತಿಗೋ?ನಿಮ್ಮ ನಿಷ್ಠೆ ಗಾಂಧೀಜಿಗೋ? ಗೋಡ್ಸೆಗೋ? ಎಂದು ಪ್ರಶ್ನೆಗಳ ಮಳೆ ಸುರಿಸಿದ್ದಾರೆ.

ಆರ್.ಎಸ್.ಎಸ್ ನಾಯಕರೇ, ಈ ರಿಮೋಟ್ ಕಂಟ್ರೋಲ್ ರಾಜಕೀಯ ಬಿಟ್ಟು ಬಿಡಿ. ನಿಮ್ಮ ತತ್ವ-ಸಿದ್ದಾಂತದ ಬಗ್ಗೆ ಅಷ್ಟೊಂದು ವಿಶ್ವಾಸ ನಿಮಗಿದ್ದರೆ ಈ ಹಿಂಬಾಗಿಲ ರಾಜಕೀಯ ಮಾಡದೆ ನೇರವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಡಿ, ಗೆಲುವು ಕೋಮುವಾದದ್ದೋ? ಜಾತ್ಯತೀತತೆಯದ್ದೋ? ನೋಡಿಯೇ ಬಿಡೋಣ ಎಂದು ಸವಾಲು ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next