ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ಜೊತೆ ಶಾಮೀಲಾಗಿದ್ದ ಆರ್ ಎಸ್‍ಎಸ್ ನಾಯಕರು ಇದೀಗ ದೇಶ ಭಕ್ತರಂತೆ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ಕಾಂಗ್ರೆಸ್ ಹೋರಾಟಕ್ಕಿಳಿದಿದ್ದರೆ, ಆರ್ ಎಸ್‍ಎಸ್ ಬ್ರಿಟಿಷರ ಜೊತೆ ಶಾಮೀಲಾಗಿತ್ತು. ಸ್ವಾತಂತ್ರ್ಯ ಹೋರಾಟ ದಲ್ಲಿ ಆರ್ ಎಸ್‍ಎಸ್, ಬಿಜೆಪಿ ಭಾಗಿ ಆಗರಿಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಭಾಗವಹಿಸಿದವರು ಕಾಂಗ್ರೆಸ್‍ಗೆ ಸೇರಿದವರು ಎಂದರು.
ಇದನ್ನೂ ಓದಿ : ಎಂಬಿಬಿಎಸ್: ದೇಶದ ಮೊದಲ ಹಿಂದಿ ಆವೃತ್ತಿ ಪುಸ್ತಕಗಳ ಬಿಡುಗಡೆ
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಳ್ಳದವರು ತಮ್ಮನ್ನು ತಾವು (ಆರ್ ಎಸ್‍ಎಸ್, ಬಿಜೆಪಿ) ಸ್ವಾತಂತ್ರ್ಯ ಹೋರಾಟಗಾರೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇಂಥವರಿಂದಲೇ ದೇಶವನ್ನು ಛಿದ್ರವಾಗುತ್ತಿದೆ. ಜನರನ್ನು ದಾರಿ ತಪ್ಪಿಸಲು ಸುಳ್ಳು ಹೇಳಿಕೊಂಡು ರಾಜಕೀಯ ಮಾಡುತ್ತಿರುವ ಬಿಜೆಪಿ ಬುರುಡೆ ಪಕ್ಷ ಎಂದು ಬದರಿಸಿಕೊಳ್ಳುವುದು ಸೂಕ್ತ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ. ಶಶಿ ತರೂರ್ ಅವರು ಸ್ಪರ್ಧಿಸಿದ್ದರೂ ಕನ್ನಡಿಗರಾದ ಖರ್ಗೆ ಅವರ ಪರ ರಾಜ್ಯದಲ್ಲಿ ಸಹಜವಾಗಿ ವಿಶೇಷ ಒಲವಿದೆ.ಎಐಸಿಸಿ ಅಧ್ಯಕ್ಷ ಸ್ಥಾನಕ್ಜೆ ಗಾಂಧಿ ಪರಿವಾರದವರು ಬಿಟ್ಟು ಬೇರೆ ನಾಯಕರಿಗೆ ಅವಕಾಶ ನೀಡಲಾಗುತ್ತಿದೆ. ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಕೂಡ ಗಾಂಧಿ ಕುಟುಂಬದ ಹೊರತಾದ ನಾಯಕರು ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಶಕ್ತಿಹೊಂದಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ಗಾಂಧಿ ಕುಟುಂಬದ ಹೊರತಾದವರಿಗೆ ನೀಡಬೇಕೆಂಬ ಆಶಯದಂತೆ ಚುನಾವಣೆ ಮೂಲಕ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.