Advertisement

High Court ಅಲ್ಪಸಂಖ್ಯಾಕ ಶಾಲೆಗಳಿಗೆ ಆರ್‌ಟಿಇ ಸುತ್ತೋಲೆ: ಸರಕಾರಕ್ಕೆ ನೋಟಿಸ್‌

12:19 AM Jul 02, 2024 | Team Udayavani |

ಬೆಂಗಳೂರು: ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ, ಶುಲ್ಕ ಸಂಗ್ರಹಕ್ಕೆ ಸಂಬಂಧಿಸಿ ಸರಕಾರ ಹೊರಡಿಸಿರುವ ಸುತ್ತೋಲೆಯನ್ನು ಆಕ್ಷೇಪಿಸಿ ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳ ಒಕ್ಕೂಟ ಸಲ್ಲಿಸಿರುವ ಅರ್ಜಿ ವಿಚಾರವಾಗಿ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ಕುರಿತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಸ್ವಲ್ಪ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಶಿಕ್ಷಣ ಇಲಾಖೆ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ನೋಟಿಸ್‌ ಜಾರಿಗೊಳಿಸಿತು. ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next