Advertisement

RTE: ದ್ವಿತೀಯ ಪಿಯುವೆರೆಗೆ ವಿಸ್ತರಣೆ ಪ್ರಸ್ತಾವನೆ ಇಲ್ಲ: ಸಚಿವ ಮಧು ಬಂಗಾರಪ್ಪ

09:08 PM Dec 16, 2024 | Team Udayavani |

ಸುವರ್ಣ ವಿಧಾನಸೌಧ: ಆರ್‌ಟಿಇ ಕಾಯ್ದೆಯಡಿ 1-8ನೇ ತರಗತಿಯವರೆಗೆ ಸರ್ಕಾರವೇ ನೀಡುತ್ತಿರುವ ಪ್ರವೇಶ ಶುಲ್ಕವನ್ನು 8 ರಿಂದ ದ್ವಿತಿಯ ಪಿಯುವರೆಗೂ ಯೋಜನೆಯನ್ನು ವಿಸ್ತರಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಸದಸ್ಯರಾದ ಎಂ.ಎಲ್‌.ಅನಿಲಕುಮಾರ್‌ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 28 ಸಾವಿರ ಮಕ್ಕಳಿಗೆ ಉಚಿತವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡಲಾಗುತ್ತಿದೆ.

ಪ್ರಸ್ತುತ ರಾಜ್ಯ ಪಠ್ಯಕ್ರಮದ 6-10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ.

6-14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ, ಕಡ್ಡಾಯ ಶಿಕ್ಷಣ ನೀಡುವುದು ಆರ್‌ಟಿಇ ಉದ್ದೇಶವಾಗಿದೆ ಎಂದರು.

ಅನುದಾನಿತ ಪಿಯು ಕಾಲೇಜಿನಲ್ಲಿ 3,355 ಬೋಧಕರ ಹುದ್ದೆ ಖಾಲಿ
ಸುವರ್ಣ ವಿಧಾನಸೌಧ: ರಾಜ್ಯದ ಖಾಸಗಿ ಅನುದಾನಿತ ಪಿಯು ಕಾಲೇಜುಗಳಲ್ಲಿ 3,355 ಬೋಧಕ ಮತ್ತು 1,623 ಬೋಧಕೇತರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

Advertisement

ವಿಧಾನಪರಿಷತ್‌ದಲ್ಲಿ ಜೆಡಿಎಸ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ 2024ರ ನಿಯಮಗಳ ಪ್ರಕಾರ ಅರ್ಹತೆಯನ್ನು ಹೊಂದುವ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅನುದಾನಿತ ಪಿಯು ಕಾಲೇಜುಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next