Advertisement
ಎ.20ರಂದು ಆನ್‌ಲೈನ್ ಲಾಟರಿ ಮೂಲಕ ಸೀಟು ಹಂಚಿಕೆ ಮಾಡಲಾಗಿತ್ತು. ಸುಮಾರು 1.11 ಲಕ್ಷ ಮಕ್ಕಳು ಸೀಟು ಪಡೆದಿದ್ದರು. ಸೀಟು ಪಡೆದ ಮಕ್ಕಳನ್ನು ಆಯಾ ಶಾಲೆಗೆ ಸೇರಿಸಲು ಎ.28 ಕೊನೆಯ ದಿನವಾಗಿತ್ತು. ಪಾಲಕ-ಪೋಷಕರು ಮತ್ತು ವಿವಿಧ ಸಂಘಟನೆಗಳ ಆಗ್ರಹದಂತೆ ದಾಖಲಾತಿ ದಿನಾಂಕವನ್ನು ಮೇ 3ರವರೆಗೂ ವಿಸ್ತರಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆ ತಿಳಿಸಿದೆ.
ವೃತ್ತಿಪರ ಕೋರ್ಸ್‌ಗಳ ಸರಕಾರಿ ಕೋಟದ ಸೀಟುಗಳ ಪ್ರವೇಶಕ್ಕೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶದ ಅನಂತರ ಅರ್ಹ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಹಾಯಕ ಕೇಂದ್ರದಲ್ಲಿ ನಡೆಯ ಲಿದೆ. ದಾಖಲಾತಿ ಪರಿಶೀಲನೆಗೆ ಹಾಜರಾಗುವ ವಿದ್ಯಾರ್ಥಿಗಳು ಸಲ್ಲಿಸಬೇಕಾದ ಮೂಲ ದಾಖಲೆ ಹಾಗೂ ದಾಖಲಾತಿ ಪರಿಶೀಲನೆ ಹೇಗೆ ಎಂಬುದರ ಬಗ್ಗೆಯೂ ವಿವರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ದಾಖಲೆ ಪರಿಶೀಲನೆಯ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ಅದೇ ಕ್ರಮ ಅನುಸರಿಸಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.