Advertisement
ಪ್ರಕರಣದಲ್ಲಿ ದಂಡ ವಿಧಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮಹೇಶ್ ಜೋಶಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ| ಎಚ್.ಟಿ. ನರೇಂದ್ರಪ್ರಸಾದ್ ಹಾಗೂ ನ್ಯಾ| ಎಸ್. ರಾಚಯ್ಯ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಮೇಲ್ಮನವಿಯಲ್ಲಿನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು. ಅಲ್ಲದೇ ಮುಂದಿನ ಆದೇಶದವರೆಗೆ ದಂಡ ವಿಧಿಸಿದ್ದ ಆದೇಶಕ್ಕೆ ತಡೆ ನೀಡಿ ವಿಚಾರಣೆ ಮುಂದೂಡಿತು.
ಎಸ್. ಭಜಂತ್ರಿ ಅವರು ದೂರದರ್ಶನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಆರ್‌ಟಿಐಯಡಿ ಕೇಳಿದ್ದರು. ಸಾರ್ವಜನಿಕ ಮಾಹಿತಿ ಅಧಿಕಾರಿ (ಪಿಐಒ) ಆಗಿದ್ದ ಡಾ| ಮಹೇಶ್ ಜೋಶಿ ಆ ಮಾಹಿತಿ ಕೊಟ್ಟಿರಲಿಲ್ಲ. ಹಾಗಾಗಿ ಭಜಂತ್ರಿ ಎರಡನೇ ಮೇಲ್ಮನವಿ ಪ್ರಾಧಿಕಾರದ ಮೊರೆ ಹೋಗಿದ್ದರು. ಅರ್ಜಿದಾರರಿಗೆ ಮಾಹಿತಿ ನೀಡುವಂತೆ ಮೇಲ್ಮನವಿ ಪ್ರಾಧಿಕಾರ ಆದೇಶಿಸಿತ್ತು. ಆದರೆ ಮಾಹಿತಿ ಒದಗಿಸುವ ಬದಲು ಮೇಲ್ಮನವಿ ಪ್ರಾಧಿಕಾರದ ಆದೇಶವನ್ನೇ ಪ್ರಶ್ನಿಸಿ ಜೋಶಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆರ್‌ಟಿಐ ಕಾಯ್ದೆಯಡಿ ಮೇಲ್ಮನವಿ ಸಲ್ಲಿಸುವ ಅಧಿಕಾರ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಇಲ್ಲ ಎಂದು ಹೇಳಿ ಏಕಸದಸ್ಯ ನ್ಯಾಯಪೀಠ ಅರ್ಜಿ ವಜಾಗೊಳಿಸಿ, 25 ಸಾವಿರ ರೂ. ದಂಡ ವಿಧಿಸಿತ್ತು. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗಿತ್ತು.