ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಶುಕ್ರವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.
Advertisement
ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.
ಬಸವನಗುಡಿ ಮಾಜಿ ಶಾಸಕ ಸುಬ್ಬಾರೆಡ್ಡಿ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡಿದ್ದರು. ಆರ್ ಟಿಐ ಕಾರ್ಯಕರ್ತರಾಗಿ ಸಾಯಿದತ್ತ ಗುರುತಿಸಿಕೊಂಡಿದ್ದರು. ಜಾಹೀರಾತು ಮಾಫಿಯಾ ವಿರುದ್ಧ ಧ್ವನಿ ಎತ್ತಿ ಸುದ್ದಿಯಾಗಿದ್ದರು.