ಪಣಜಿ: ಜಗತ್ತಿನ ಹಲವು ದೇಶಗಳಲ್ಲಿ ಓಮೆಕ್ರಾನ್ ಕರೋನಾ ರೂಪಾಂತರಿ ಪತ್ತೆಯಾಗುತ್ತಿದ್ದು ಆತಂಕ ಹೆಚ್ಚುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗಿದೆ.
ವಿದೇಶದಿಂದ ಬರುವ ಎಲ್ಲ ಪ್ರವಾಸಿಗರಿಗೂ RTPCR ತಪಾಸಣೆ ಖಡ್ಡಾಯಗೊಳಿಸಲಾಗಿದ್ದು ತವೇ ಸ್ವತಃ ಮನೆಯಲ್ಲಿ ಕ್ವಾರಂಟೈನ್ ಆಗಬೇಕು ಎಂಬ ಸೂಚನೆಯನ್ನೂ ನೀಡಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಪಣಜಿಯಲ್ಲಿ ಸುದ್ಧಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು- ಹೋಟೆಲ್ ರೂಂಗಳಲ್ಲಿ ಕ್ವಾರಂಟೈನ್‍ನಲ್ಲಿರುವ ವಿದೇಶಗಳಿಂದ ಆಗಮಿಸಿರುವ ಪ್ರವಾಸಿಗರನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಪ್ರತಿದಿನ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕರೋನಾ ರೂಪಾಂತರಿ ಓಮೆಕ್ರೊನ್ ಪತ್ತೆಗಾಗಿ ಗೋವಾದಿಂದ ಕೆಲ ಸ್ಯಾಂಪಲ್ಸಗಳನ್ನು ಪುಣೆಗೆ ಕಳುಹಿಸಲಾಗಿದ್ದು ವರದಿ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಗೋವಾ ಸಜ್ಜಾಗಿದ್ದು ರೂಪಾಂತರಿ ತೆಡೆಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಗೋವಾ ರಾಜ್ಯದಲ್ಲಿ ಸದ್ಯ ಕರೋನಾ ಸೋಂಕಿನಿಂದ ಗುಣಮುಖರಾಗುವ ಪ್ರಮಾಣ ಶೇ.97.90 ರಷ್ಟಿದೆ. ರಾಜ್ಯದಲ್ಲಿ ಸದ್ಯ 380 ಕರೋನಾ ಸಕ್ರೀಯ ಪ್ರಕರಣಗಳಿವೆ.
ಇದನ್ನೂ ಓದಿ : ಬಂಟ್ವಾಳ : ಬೇಟೆಗಾಗಿ ಬಂದು ಹೆದರಿ ಓಡಿದ ಚಿರತೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ