ಕುಂದಾಪುರ: ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳುವ ವೇಳೆ ರಸ್ತೆಯಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿ ಏಟು ನೀಡಿದ ಘಟನೆ ಶುಕ್ರವಾರ ಕೋಟೇಶ್ವರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ.
ಬಾರಕೂರು ಮೂಲದ ಸದ್ಯ ಈ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್ (35) ಆರೋಪಿ.
ಆರೋಪಿ ನಜೀರ್ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಕೂಡಲೇ ಆ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಸ್ಥಳೀಯರೆಲ್ಲ ಸೇರಿ, ವಿಚಾರಿಸಿದಾಗ ನಡೆದ ಘಟನೆಯನ್ನು ಆಕೆ ವಿವರಿಸಿದ್ದಾಳೆ. ಈ ವೇಳೆ ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.
ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.