Advertisement

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

03:48 PM May 03, 2024 | Team Udayavani |

ರಿಷಿ ನಟನೆಯ ಮತ್ತೂಂದು ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ರುದ್ರ ಗರುಡ ಪುರಾಣ’. ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆಯಾಗಿದೆ. ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಈ ಚಿತ್ರದ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಫ‌ಸ್ಟ್‌ ಲುಕ್‌ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಚಿತ್ರತಂಡದ ಮೊಗದಲ್ಲಿ ನಗುಮೂಡಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

Advertisement

ಅಶ್ವಿ‌ನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿ‌ನಿ ಲೋಹಿತ್‌ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಂಬಲ್‌, ಡಿಯರ್‌ ವಿಕ್ರಮ್ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್‌ ನಂದೀಶ್‌ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ರಿಷಿ, “ನನಗೆ ಒಂದೇ ಜಾನರ್‌, ಒಂದೇ ತೆರನಾದ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಇಷ್ಟವಿಲ್ಲ. ಆದರೆ, ಈ ಕಥೆ ಕೇಳಿದ ನಂತರ ಖುಷಿಯಿಂದ ಒಪ್ಪಿಕೊಂಡೆ. ನನ್ನ ಹಿಂದಿನ ಚಿತ್ರಗಳಿಗೆ ಈ ಚಿತ್ರಕ್ಕೂ ಯಾವುದೇ ಹೋಲಿಕೆ ಇಲ್ಲ. ಚಿತ್ರದಲ್ಲಿ ಸಾಕಷ್ಟು ಆಯಾಮಗಳು ಬರುತ್ತವೆ. ಗರುಡ ಪುರಾಣದ ಕೆಲವು ಅಂಶಗಳು ಕೂಡಾ ಈ ಸಿನಿಮಾದಲ್ಲಿ ಬರುತ್ತವೆ’ ಎನ್ನುತ್ತಾರೆ.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕಾ ನಟಿಸಿದ್ದಾರೆ. ವಿನೋದ್‌ ಆಳ್ವ, ಅವಿನಾಶ್‌, ಶಿವರಾಜ್‌ ಕೆ.ಆರ್‌. ಪೇಟೆ, ಗಿರಿ, ಕೆ.ಎಸ್‌. ಶ್ರೀಧರ್‌, ಅಶ್ವಿ‌ನಿ ಗೌಡ, ರಾಮ್‌ ಪವನ್‌, ವಂಶಿ, ಆಕರ್ಷ, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರದ್ವಿ ಮುಂತಾದವರು ತಾರಾ ಬಳಗ ದಲ್ಲಿದ್ದಾರೆ.

ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್‌ ಕುಮಾರ್‌ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್‌ ಸಂಕಲನ ಈ ಚಿತ್ರಕ್ಕಿದೆ.

Advertisement

ಈಗಾಗಲೇ ರುದ್ರ ಗರುಡ ಪುರಾಣ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next