Advertisement

ರುದ್ರೇಶ್‌ ಹತ್ಯೆ ಪ್ರಕರಣ: ಎನ್‌ಐಎ ಆದೇಶ ಎತ್ತಿಹಿಡಿದ ವಿಭಾಗೀಯ ಪೀಠ

06:20 AM Mar 27, 2018 | |

ಬೆಂಗಳೂರು: ಆರ್‌ಎಸ್‌ಎಸ್‌ ಮುಖಂಡ ರುದ್ರೇಶ್‌ ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆಗೆ ಆದೇಶಿಸಿದ್ದ ಕೇಂದ್ರಸರ್ಕಾರದ ನಿರ್ಧಾರವನ್ನು ಹೈಕೋರ್ಟ್‌ ವಿಭಾಗೀಯ ಪೀಠ ಎತ್ತಿಹಿಡಿದಿದೆ. 

Advertisement

ರುದ್ರೇಶ್‌ ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆ ಆದೇಶ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕೇಂದ್ರಗೃಹ ಇಲಾಖೆ ಸಲ್ಲಿಸಿದ್ದ ಮೇಲ್ಮನವಿಯನ್ನು ಪುರಸ್ಕರಿಸಿದ ನ್ಯಾ. ಎಚ್‌.ಜಿ ರಮೇಶ್‌ ಹಾಗೂ ನ್ಯಾ. ಪಿ.ಎಸ್‌ ದಿನೇಶ್‌ಕುಮಾರ್‌ ಅವರಿದ್ದ ವಿಭಾಗೀಯ ಪೀಠ, ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿತು.ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಸರಿಯಲ್ಲ. ಅಲ್ಲದೆ, ಪ್ರಕರಣ ಆರೋಪಿಗಳಿಗೆ ಯಾವ ತನಿಖಾ ಸಂಸ್ಥೆ ತನಿಖೆ ನಡೆಸಬೇಕು ಎಂದು ಹೇಳುವ ಅಧಿಕಾರವಿಲ್ಲ. ರುದ್ರೇಶ್‌ ಹತ್ಯೆ ಪ್ರಕರಣದಲ್ಲಿ ಎನ್‌ಐಎ ತನಿಖೆ ತೀರ್ಮಾನ ಕೈಗೊಂಡಿದ್ದ ಕೇಂದ್ರದ ಕ್ರಮ ಸರಿಯಾಗಿದೆ ಎಂದು ತೀರ್ಪಿನಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next