Advertisement

370ನೇ ವಿಧಿ ರದ್ದು: ಕಣಿವೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ

09:52 AM Nov 28, 2019 | Team Udayavani |

ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ವೇಳೆ ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳುವ ಮುನ್ನೆಚ್ಚರಿಕೆ ಕ್ರಮವಾಗಿ 5,000ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ 609 ಇನ್ನೂ ಬಂಧನದಲ್ಲಿದ್ದಾರೆ ಎಂದು ಕೇಂದ್ರ ಸಚಿವ ಜಿ. ಕಿಶನ್‌ ರೆಡ್ಡಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

Advertisement

ಅಗಸ್ಟ್‌ 5ರಿಂದ ಪೊಲೀಸ್‌ ಗುಂಡಿನ ದಾಳಿಯಲ್ಲಿ ಕಣಿವೆಯಲ್ಲಿ ಯಾರೂ ಸಾವನ್ನಪ್ಪಿಲ್ಲ. ಆದರೆ ಕಾನೂನು ಮತ್ತು ಸುವ್ಯವಸ್ಥೆಗಳನ್ನು ಕಾಯ್ದುಕೊಳ್ಳುವ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ 197 ಜನರು ಗಾಯಗೊಂಡಿದ್ದಾರೆ. ಶಾಂತಿ ಉಲ್ಲಂಘನೆ, ಕಲ್ಲು ತೂರಾಟಗಾರರು, ದುಷ್ಕರ್ಮಿಗಳು, ಪ್ರತ್ಯೇಕತಾವಾದಿಗಳು ಮತ್ತು ರಾಜಕೀಯ ಕಾರ್ಯಕರ್ತರನ್ನು ಒಳಗೊಂಡಂತೆ ಸುಮಾರು 5,161 ಮಂದಿಯನ್ನು ಬಂಧಿಸಲಾಗಿತ್ತು. ಇವರಲ್ಲಿ 609 ಜನರು ಇನ್ನೂ ಬಂಧನದಲ್ಲಿದ್ದು, ಅದರಲ್ಲಿ ಸುಮಾರು 218 ಜನರು ಕಲ್ಲು ತೂರಾಟಗಾರರು ಎಂದು ಸಚಿವರು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.

ಬಂಧನಕ್ಕೊಳಗಾದವರಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್‌ ಅಬ್ದುಲ್ಲಾ, ಒಮರ್‌ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದ್ದಾರೆ. ಇವರನ್ನು ಶಾಂತಿ ಕಾಪಾಡಲು ಸಹಕಾರವಾಗುವಂತೆ ಬಂಧನದಲ್ಲಿರಿಸಲಾಗಿತ್ತು.

ಜಮ್ಮು ಮತ್ತು ಕಾಶ್ಮೀರ ಸರಕಾರ ವರದಿ ಪ್ರಕಾರ ಆಗಸ್ಟ್‌ 5ರಿಂದ ಕಾನೂನು ಸುವ್ಯವಸ್ಥೆ ಘಟನೆಗಳಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ. ಈ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಘಟನೆಗಳಲ್ಲಿ 197 ಜನರು ಗಾಯಗೊಂಡಿದ್ದಾರೆ. ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಮೂವರು ಭದ್ರತಾ ಪಡೆ ಸಿಬಂದಿ ಮತ್ತು 17 ನಾಗರಿಕರು ಸಾವನ್ನಪ್ಪಿದ್ದು, 129 ಜನರು ಗಾಯಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next