ನವದೆಹಲಿ/ಕೋಲ್ಕತಾ:ಮುಂಬರುವ ವಿಧಾನಸಭಾ ಚುನಾವಣೆಗೂ ಮುನ್ನವೇ ಆರಂಭಿಸಿರುವ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ್ದ ಅವರು, ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸಿಎಎ(ತಿದ್ದುಪಡಿ) ಕಾಯ್ದೆಯ ನಿಯಮ ಇನ್ನೂ ರೂಪಿಸಲಾಗಿಲ್ಲ. ಅಲ್ಲದೇ ಒಂದು ಬಾರಿ ಕೋವಿಡ್ ಲಸಿಕೆ ನೀಡಲು ಆರಂಭಿಸಿದ ನಂತರ ಈ ವಿಷಯದ ಕುರಿತು ಪರಿಗಣಿಸಲಾಗುವುದು ಎಂದು ತಿಳಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಮತ್ತೆ ತಿದ್ದುಪಡಿ ತರುವುದು ದೊಡ್ಡ ಪ್ರಮಾಣದ ಪ್ರಕ್ರಿಯೆಯಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಇನ್ನೂ ಆ ಕಾರ್ಯ ಸಾಧ್ಯವಾಗಿಲ್ಲ. ಒಂದು ಬಾರಿ ಕೋವಿಡ್ 19 ಲಸಿಕೆ ನೀಡಲು ಆರಂಭಿಸಿದ ನಂತರ ಸಿಎಎ ತಿದ್ದುಪಡಿ ಕಾಯ್ದೆ ಕೂಡಲೇ ರೂಪಿಸಿ ಜಾರಿಗೊಳಿಸಲಾಗುವುದು ಎಂದು ಶಾ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತ ಹೇಳಿದರು.
ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿ ಹಾಕಿ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ನಿಟ್ಟಿನಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆಕೆಯ ಪಕ್ಷ “ಒಳಗಿನವರು, ಹೊರಗಿನವರು” ಎಂಬ ವಿಷಯ ಪ್ರಸ್ತಾಪಿಸುತ್ತಿದೆ ಎಂದು ಶಾ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಪೋಷಕರೇ ನಿಮ್ಮ ಮಕ್ಕಳ ಬಗ್ಗೆ ಇರಲಿ ಎಚ್ಚರ! : ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ಸಕ್ರಿಯ
ಒಂದು ವೇಳೆ ಪಶ್ಚಿಮಬಂಗಾಳದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕಾರ ನೀಡಿದರೆ ಈ ನೆಲದ ನಾಯಕನೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ ಅಭಿವೃದ್ದಿಯನ್ನು ಮರೆಮಾಚಿದೆ ಎಂದು ಶಾ ಆರೋಪಿಸಿದರು.