Advertisement
ಯಾವುದೇ ಪ್ರಭಾವ ಮತ್ತು ಪಕ್ಷಪಾತ ಧೋರಣೆ ಇಲ್ಲದೆ ಅರ್ಹ ವ್ಯಕ್ತಿಯನ್ನು ಸರ್ಕಾರಿ ಸೇವೆಗೆ ನೇಮಕ ಮಾಡಿಕೊಳ್ಳಬೇಕು ಎನ್ನುವುದು ಆಶಯ. ಹೀಗಾಗಿ, ನಡುವೆಯೇ ಅರ್ಹತೆಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲು ಮಾಡುವಂತಿಲ್ಲ. ಒಂದು ವೇಳೆ ಬದಲಾವಣೆ ಮಾಡುವುದಿದ್ದರೂ, ಅದು ನಿಯಮಗಳಿಗೆ ಮತ್ತು ಸಂವಿಧಾನದಲ್ಲಿ ಉಲ್ಲೇಖವಾಗಿರುವಂತೆ ಸಮಾನತೆಯ ಹಕ್ಕುಗಳನ್ನು ಮೀರಬಾರದು ಎಂದು ಹೇಳಿದೆ.
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದರೆ ಅದಕ್ಕೆ ಸರ್ಕಾರದ ಅನುಮತಿ ಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ರಕ್ಷಣೆಗೆ ಇಂಥ ಕ್ರಮ ಅಗತ್ಯ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಕೋರ್ಟ್, ಸರ್ಕಾರದ ಪೂರ್ವಾನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಅನ್ವಯವಾಗುತ್ತದೆ ಎಂದು ಹೇಳಿತು.
Related Articles
Advertisement