Advertisement

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

11:01 PM Nov 07, 2024 | Team Udayavani |

ನವದೆಹಲಿ: ಸರ್ಕಾರಿ ಉದ್ಯೋಗಕ್ಕೆ ನೇಮಕ ಪ್ರಕ್ರಿಯೆ ವೇಳೆ ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಬದಲಾವಣೆ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಒಂದು ವೇಳೆ, ನಿಯಮಗಳನ್ನು ಬದಲಾವಣೆ ಮಾಡಬೇಕು ಎಂಬ ಸೂಚನೆ ಇದ್ದರೆ ಮಾತ್ರ ಅದಕ್ಕೆ ಅವಕಾಶ ಇದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Advertisement

ಯಾವುದೇ ಪ್ರಭಾವ ಮತ್ತು ಪಕ್ಷಪಾತ ಧೋರಣೆ ಇಲ್ಲದೆ ಅರ್ಹ ವ್ಯಕ್ತಿಯನ್ನು ಸರ್ಕಾರಿ ಸೇವೆಗೆ ನೇಮಕ ಮಾಡಿಕೊಳ್ಳಬೇಕು ಎನ್ನುವುದು ಆಶಯ. ಹೀಗಾಗಿ, ನಡುವೆಯೇ ಅರ್ಹತೆಗೆ ಸಂಬಂಧಿಸಿದ ನಿಯಮಗಳಲ್ಲಿ ಬದಲು ಮಾಡುವಂತಿಲ್ಲ. ಒಂದು ವೇಳೆ ಬದಲಾವಣೆ ಮಾಡುವುದಿದ್ದರೂ, ಅದು ನಿಯಮಗಳಿಗೆ ಮತ್ತು ಸಂವಿಧಾನದಲ್ಲಿ ಉಲ್ಲೇಖವಾಗಿರುವಂತೆ ಸಮಾನತೆಯ ಹಕ್ಕುಗಳನ್ನು ಮೀರಬಾರದು ಎಂದು ಹೇಳಿದೆ.

ಅಧಿಕಾರಿ ವಿರುದ್ಧ ಕೇಸು ದಾಖಲಿಸಲು ಸರ್ಕಾರದ ಅನುಮತಿ ಬೇಕು: ಸುಪ್ರೀಂ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದ್ದರೆ ಅದಕ್ಕೆ ಸರ್ಕಾರದ ಅನುಮತಿ ಬೇಕು. ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ರಕ್ಷಣೆಗೆ ಇಂಥ ಕ್ರಮ ಅಗತ್ಯ ಎಂದು ಸುಪ್ರೀಂಕೋರ್ಟ್‌ ಆದೇಶ ನೀಡಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಕೋರ್ಟ್‌, ಸರ್ಕಾರದ ಪೂರ್ವಾನುಮತಿ ಪಡೆದುಕೊಳ್ಳಬೇಕೆಂಬ ನಿಯಮ ಅನ್ವಯವಾಗುತ್ತದೆ ಎಂದು ಹೇಳಿತು.

ತೆಲಂಗಾಣದ ಇಬ್ಬರು ಐಎಎಸ್‌ ಅಧಿಕಾರಿಗಳ ವಿರುದ್ಧ ಮೊಕದ್ದಮೆ ದಾಖಲಿಸಲು ಸರ್ಕಾರದ ಅನುಮತಿ ಬೇಕು ಎಂಬ ಹೈಕೋರ್ಟ್‌ ತೀರ್ಪಿಗೆ ಸಹಮತ ವ್ಯಕ್ತಪಡಿಸಿ ನ್ಯಾಯಪೀಠ ಈ ಆದೇಶ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next