Advertisement

ಲಖೀಂಪುರ ಹಿಂಸಾಚಾರ ಘಟನೆ ಖಂಡಿಸಿ ಮಹಾರಾಷ್ಟ್ರದಲ್ಲಿ ಬಂದ್ ಗೆ ಕರೆ ನೀಡಿದ ಮಹಾ ವಿಕಾಸ್ ಅಘಾಡಿ

08:38 AM Oct 11, 2021 | Team Udayavani |

ಮುಂಬೈ: ಉತ್ತರ ಪ್ರದೇದ ಲಖೀಂಪುರದಲ್ಲಿ ಕೆಲ ದಿನಗಳ ಹಿಂದೆ ನಡೆದ ಹಿಂಸಾಚಾರದಲ್ಲಿ ರೈತರು ಮೃತಪಟ್ಟ ಘಟನೆಯನ್ನು ಖಂಡಿಸಿ ಮಹಾರಾಷ್ಟ್ರ ರಾಜ್ಯದಲ್ಲಿಂದು ಬಂದ್ ಗೆ ಕರೆ ನೀಡಲಾಗಿದೆ.

Advertisement

ಮಹಾರಾಷ್ಟ್ರದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದಿಂದಲೇ ಇಂದು ಮಹಾರಾಷ್ಟ್ರ ಬಂದ್ ಗೆ ಕರೆ ನೀಡಲಾಗಿದೆ.

ಮಧ್ಯರಾತ್ರಿಯಿಂದ ಆರಂಭವಾಗುವ ಬಂದ್‌ಗೆ ರಾಜ್ಯದ ಮೂರು ಆಡಳಿತ ಮಿತ್ರ ಪಕ್ಷಗಳಾದ ಶಿವಸೇನೆ, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್ ಕರೆ ನೀಡಿದ್ದು, ಜನರು ಬಂದ್ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸೋಮವಾರ ರಾಜ್ಯದಲ್ಲಿ ಎಲ್ಲವನ್ನೂ ಮುಚ್ಚಲಾಗುವುದು ಎಂದು ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರ ತಿಳಿಸಿದೆ. ಬಂದ್ ಅನ್ನು ರಾಜ್ಯ ಪ್ರಾಯೋಜಿತವಲ್ಲ ಆದರೆ ಪಕ್ಷಗಳು ಕರೆ ನೀಡಿವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ತಮ್ಮ ಪಕ್ಷವು ಮುಂಬೈನ ರಾಜಭವನದ ಹೊರಗೆ “ಮೌನ ವ್ರತ” ವನ್ನು ಆಚರಿಸುವುದಾಗಿ ಹೇಳಿದ್ದಾರೆ.

Advertisement

ಇದನ್ನೂ ಓದಿ:ಅಜಯ್‌ ಮಿಶ್ರಾ ರಾಜೀನಾಮೆ ಬೇಕು: ಪ್ರಿಯಾಂಕಾ ವಾದ್ರಾ

ಎನ್‌ಸಿಪಿ ಪಕ್ಷವು ಟ್ವೀಟ್‌ ಗಳಲ್ಲಿ ಕೇಂದ್ರ ಸರ್ಕಾರವನ್ನು “ದಮನಕಾರಿ” ಎಂದು ಕರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿದೆ.

ಹಲವಾರು ಸಂಘಟನೆಗಳು ಬಂದ್‌ಗೆ ಬೆಂಬಲವನ್ನು ನೀಡಿವೆ. ರಿಟೇಲ್ ಟ್ರೇಡರ್ಸ್ ವೆಲ್‌ಫೇರ್ ಅಸೋಸಿಯೇಶನ್ ತನ್ನ ಪತ್ರಿಕಾ ಹೇಳಿಕೆಯಲ್ಲಿ, ಆಡಳಿತ ಒಕ್ಕೂಟ ಕರೆ ನೀಡಿರುವ ಬಂದ್‌ಗೆ ಬೆಂಬಲವಾಗಿ ಸಂಜೆ 4 ಗಂಟೆಯವರೆಗೆ ಅಂಗಡಿಗಳನ್ನು ಮುಚ್ಚಲು ನಿರ್ಧರಿಸಿದೆ ಎಂದು ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next