Advertisement

30ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ: ಗೋವಿಂದ ಕಾರಜೋಳ

04:38 PM Jan 12, 2021 | Nagendra Trasi |

ಚಡಚಣ: ಪಟ್ಟಣದಲ್ಲಿ ನಿರ್ಮಿಸಲಾದ ನೂತನ ಪ್ರವಾಸಿ ಮಂದಿರ ಸೇರಿದಂತೆ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಜ. 30ರಂದು ಚಡಚಣದಲ್ಲಿ ನೆರವೇರಿಸಲಾಗುವದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

Advertisement

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ನೂತನ ಚಡಚಣ ತಾಲೂಕು ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ. ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಲು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರ್‌ಗೆ  ಸೂಚಿಸಿದ್ದೇನೆ. ಸೂಕ್ತ ನಿವೇಶನ ದೊರೆಯದಿದ್ದರೆ ಪ್ರವಾಶಿ ಮಂದಿರ ಆವರಣದಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲಾಗುವದು ಎಂದರು.

ಝಳಕಿ -ಶಿರಾಡೋಣ ರಾಜ್ಯ ಹೆದ್ದಾರಿ ಪುನರ್‌ ನಿರ್ಮಾಣ ಹಾಗೂ ಪಟ್ಟಣದಲ್ಲಿ ಅರ್ಧಕ್ಕೆ ನಿಂತಿರುವ ಪ್ರಮುಖ ರಸ್ತೆ ಕಾಮಗಾರಿ ತಕ್ಷಣ ಪುನರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವದು. ಶಾಸಕ ದೇವಾನಂದ ಚವ್ಹಾಣ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ನಾನು ತಡೆಯೊಡ್ಡುತ್ತಿದ್ದೇನೆ ಎಂದು ಆರೋಪಿಸುತ್ತಿರುವದು ಸರಿಯಲ್ಲ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಲ್ಲ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ರಾಮ ಅವಟಿ, ಜಿಪಂ ಸದಸ್ಯ ಭಿಮಾಶಂಕರ ಬಿರಾದಾರ, ಶಿವಸರಣ ಭೈರಗೊಂಡ, ಜಿಪಂ ಮಾಜಿ ಉಪಾಧ್ಯಕ್ಷ ಶ್ರೀಶೈಲಗೌಡ
ಬಿರಾದಾರ, ಮುಖಂಡರಾದ ಅಪ್ಪುಗೌಡ ಪಾಟೀಲ, ಕಲ್ಲು ಉಟಗಿ, ಪ್ರಭಾಕರ ನಿರಾಳೆ, ಪೀರಪ್ಪ ಅಗಸರ, ಎ.ಆರ್‌. ಕುಲಕರ್ಣಿ, ಮಲ್ಲೇಶಪ್ಪ ಡೊಳ್ಳಿ,
ತಹಶೀಲ್ದಾರ್‌ ಸುರೇಶ ಚವಲರ, ಕಂದಾಯ ಉಪ ವಿಭಾಗಾಧಿಕಾರಿ ರಾಹುಲ್‌ ಶಿಂಧೆ, ಪಪಂ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ಸಿಪಿಐ ಚಿದಂಬರ
ಮಡಿವಾಳ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next