Advertisement
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ಲಸಿಕೆ ನೀಡುವಿಕೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಚಾಲನೆ ನೀಡಿದರು. ಬ್ರಿಮ್ಸ್ ಡಿ ದರ್ಜೆ ನೌಕರರಾದ ಇಂದುಮತಿ ಅವರು ಮೊದಲ ಫಲಾನುಭವಿಯಾಗಿ ವ್ಯಾಕ್ಸಿನ್ ಪಡೆದುಕೊಂಡರು.
Related Articles
Advertisement
ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 72 ಲಸಿಕಾ ಕೇಂದ್ರವನ್ನು ತೆರೆಯಲಾಗಿದ್ದು, ಮೊದಲನೇ ಹಂತದಲ್ಲಿ 6 ಕೇಂದ್ರಗಳಲ್ಲಿ ಪ್ರತಿ ಕೇಂದ್ರದಲ್ಲಿ ತಲಾ 100 ಜನ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲು ನಿರ್ಧರಿಸಲಾಗಿದ್ದು. ಮೊದಲ ಹಂತದಲ್ಲಿ ಒಟ್ಟು 600 ಮಂದಿಗೆ ಶನಿವಾರ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ. ರೆಡ್ಡಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿ ಇದುವರೆಗೆ 10240 ಮಂದಿಯನ್ನು ನೋಂದಣಿ ಮಾಡಿಕೊಂಡಿದ್ದು, ಮೊದಲು ಆರೋಗ್ಯ ಕಾರ್ಯಕರ್ತರಿಗೆ, ನಂತರ ಪೊಲೀಸ್ ಸಿಬ್ಬಂದಿ ಹಾಗೂ ಕಂದಾಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಹಾಗೂ ಆಶಾ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ನಂತರ ಸರ್ಕಾರದ ಸೂಚನೆ ನೀಡಿದ ಬಳಿಕ ಜಿಲ್ಲೆಯ ಉಳಿದ ಇತರರಿಗೆ ಲಸಿಕೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ
ಬ್ರಿಮ್ಸ್ ಸೇರಿದಂತೆ ಔರಾದ್, ಹುಮನಬಾದ್, ಭಾಲ್ಕಿ, ಬಸವಕಲ್ಯಾಣ, ಆಣದೂರ ಆಸ್ಪತ್ರೆಗಳಲ್ಲಿ ಕೂಡ ಲಸಿಕಾ ನೀಡುವ ಕಾರ್ಯ ನಡೆಯುತ್ತಿದೆ. ಲಸಿಕೆ ವಿತರಣೆಯ ನಿರ್ವಹಣೆಗಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಕಂಟ್ರೋಲ್ ರೂಮ್ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ.
ಕೋವಿಡ್ ಪ್ರಕರಣಗಳು ಪತ್ತೆಯಾದಾಗಿನಿಂದ ವಾರಿಯರ್ಸ್ ಗಳಾಗಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇನೆ. ಕೊರೊನಾ ಲಸಿಕೆ ಪಡೆಯುವ ಮುನ್ನ ಸ್ವಲ್ಪ ಹೆದರಿಕೆ ಆಗಿತ್ತು. ಆದರೆ, ಮೊದಲು ಫಲಾನುಭವಿಯಾಗಿ ಪಡೆದ ನಂತರ ಯಾವುದೇ ಆತಂಕ ಇಲ್ಲ. ಜ್ವರ, ತಲೆ ನೋವು ಇಂಥ ಯಾವುದೇ ಅಡ್ಡ ಪರಿಣಾಮವೂ ನನಗೆ ಆಗಿಲ್ಲ. ಹಾಗಾಗಿ ಜನ ಭಯ ಪಡುವ ಅಗತ್ಯವಿಲ್ಲ. ಎಲ್ಲರೂ ಲಸಿಕೆ ಪಡೆಯಬೇಕು.
– ಇಂದುಮತಿ
ಲಸಿಕೆ ಪಡೆದ ಮೊದಲ ಡಿ ಗ್ರೂಪ್ ನೌಕರರು.