Advertisement

ಕಾರ್ಕಳ ಪುರಸಭೆ ಮುಖ್ಯಾಧಿಕಾರಿಯಾಗಿ ರೂಪಾ ಶೆಟ್ಟಿ ಅಧಿಕಾರ ಸ್ವೀಕಾರ

03:31 PM May 17, 2021 | Team Udayavani |

ಕಾರ್ಕಳ: ಕಾರ್ಕಳ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ರೂಪ ಶೆಟ್ಟಿ ಸೋಮವಾರ ಅಧಿಕಾರ ವಹಿಸಿಕೊಂಡರು. ಪುರಸಭೆ ಉಪಾಧ್ಯಕ್ಷೆ ಪಲ್ಲವಿ ಹಾಗೂ ಸಿಬ್ಬಂದಿಗಳು ನೂತನ ಮುಖ್ಯಾಧಿಕಾರಿಗಳನ್ನು ಸ್ವಾಗತಿಸಿದರು.

Advertisement

ಪುತ್ತೂರು ನಗರ ಸಭೆ ಆಯುಕ್ತರಾಗಿ ನಾಲ್ಕೂವರೆ ವರ್ಷಗಳ ಕಾಲ ಸೇವೆ ಸಲ್ಲಿಸಿ ಅವರು ಕಾರ್ಕಳ ಪುರಸಭೆಗೆ ವರ್ಗಾವಣೆ ಗೊಂಡಿದ್ದಾರೆ. ಈ ಹಿಂದೆ ಮಂಗಳೂರು ಮಹಾನಗರ ಪಾಲಿಕೆ, ಉಳ್ಳಾಲ ಸೇರಿದಂತೆ ಮೊದಲಾದ ಕಡೆ ಕರ್ತವ್ಯ ನಿರ್ವಹಿಸಿದ್ದರು.

ಕಾರ್ಕಳ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ರೇಖಾ ಜೆ.ಶೆಟ್ಟಿ ವರ್ಗಾವಣೆಗೊಂಡು ತೆರವಾದ ಸ್ಥಾನಕ್ಕೆ ಇವರ ನೇಮಕಾತಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next