Advertisement

ಗ್ರಾಮೀಣ ಪ್ರಗತಿಗೆ ಪೂರಕ ತಂತ್ರಜ್ಞಾನ ಅಭಿವೃದ್ಧಿ ಅವಶ್ಯ

03:42 PM Apr 15, 2018 | Team Udayavani |

ಹುಬ್ಬಳ್ಳಿ: ಗ್ರಾಮೀಣ ಪ್ರದೇಶಗಳ ಪ್ರಗತಿಗೆ ಪೂರಕವಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸಬೇಕಾಗಿದೆ ಎಂದು ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಪತಿ ಡಾ| ಬಿ. ತಿಮ್ಮೇಗೌಡ ಹೇಳಿದರು.

Advertisement

ತಾರಿಹಾಳ ಕೈಗಾರಿಕೆ ಪ್ರದೇಶದ ಐಇಎಂಎಸ್‌ ಬ್ಯುಸಿನೆಸ್‌ ಶಾಲೆಯಲ್ಲಿ ಆಯೋಜಿಸಿದ್ದ ಕೃಷಿ-ಉದ್ಯಮ ಮತ್ತು ಹೊಸ ಬೇಸಾಯ ವಿಷಯ ಕುರಿತ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಆವಿಷ್ಕಾರಗಳು ನಮ್ಮ ಸಮಾಜಕ್ಕೆ ಎಷ್ಟರ ಮಟ್ಟಿಗೆ ಅನುಕೂಲವಾಗುತ್ತವೆ ಎಂಬುದನ್ನು ಮೊದಲು ಮನದಟ್ಟು ಮಾಡಿಕೊಳ್ಳಬೇಕು. ಒಂದು ಸಂಶೋಧನೆ ಒಂದು ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿರಬೇಕು ಎಂದರು.

ಐಇಎಂಸ್‌ ಶಿಕ್ಷಣ ಸಂಸ್ಥೆಯ ಚೇರ್ಮನ್‌ ಡಾ| ಎನ್‌.ಎ. ಚರಂತಿಮಠ ಮಾತನಾಡಿ, ಗ್ರಾಮೀಣ ಭಾಗದ ಆರ್ಥಿಕ ಪ್ರಗತಿ ಕುರಿತಾಗಿ ವಿದ್ಯಾರ್ಥಿಗಳು ಆವಿಷ್ಕಾರಕ್ಕೆ ಮುಂದಾಗಬೇಕು. ಗ್ರಾಮೀಣ ಭಾಗದಲ್ಲಿ ರೈತರು ಕೃಷಿಯಲ್ಲಿ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಸಮಸ್ಯೆಗಳನ್ನು ಎತ್ತಿಕೊಂಡು ಅವುಗಳಿಗೆ ಪರಿಹಾರ ಹುಡುಕುವಂತ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕು ಎಂದರು. ಸಿ.ವಿ. ಪ್ರಕಾಶ, ಎಸ್‌.ಆರ್‌. ಪಾಟೀಲ ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next