ಕೋಟಾದಡಿ ಸೀಟು ಪಡೆದವರು ಒಂದು ವರ್ಷ ಗ್ರಾಮೀಣ ಸೇವೆ ಮಾಡುವುದನ್ನು ಕಡ್ಡಾಯ ಮಾಡುವ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ನೀಡಲಾಯಿತು.
Advertisement
ವಿಧೇಯಕ ಮಂಡಿಸಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಒಂದು ವರ್ಷ ಗ್ರಾಮೀಣ ಸೇವೆ ಪಡೆಯುವುದನ್ನುಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ವೈದ್ಯಕೀಯ ಕೋರ್ಸ್ ಮಾಡಿದ ಎಲ್ಲರಿಗೂ ಕಡ್ಡಾಯ ತರಬೇತಿ ಎಂದು ಸೂಚಿಸಲಾಗಿತ್ತು. ಅದು ಸಾಕಷ್ಟು ಗೊಂದಲ ಉಂಟಾಗಿ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಿರುವುದರಿಂದ ಅದನ್ನು ಸರಿಪಡಿಸಲು, ರಾಜ್ಯದಲ್ಲಿ ಸೇವೆ ಸಲ್ಲಿಸಲು ಬಯಸುವ ಎಲ್ಲ ಅಭ್ಯರ್ಥಿಗಳಿಗೂ ಕಡ್ಡಾಯ ಗ್ರಾಮೀಣ ಸೇವೆ ಮಾಡಲು ತಿದ್ದುಪಡಿ ತರಲಾಗಿದೆ. ಅಲ್ಲದೇ, ಗ್ರಾಮೀಣ ಸೇವೆ ತಪ್ಪಿಸಿಕೊಳ್ಳುವುದನ್ನು ತಡೆಯಲು ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ 8 ರಿಂದ 9 ಸಾವಿರ ವಿದ್ಯಾರ್ಥಿಗಳು ವೈದ್ಯ ಕೋರ್ಸ್ ಮುಗಿಸಿ ಹೊರ ಬರುತ್ತಾರೆ. ಆದರೆ, ಸರ್ಕಾರ ತಿದ್ದುಪಡಿ ತರುವುದರಿಂದ ಕನಿಷ್ಠ 3 ಸಾವಿರ ಪದವೀಧರರು ಗ್ರಾಮೀಣ ಸೇವೆಗೆ ಲಭ್ಯವಾಗಲಿದ್ದಾರೆ ಎಂದುಹೇಳಿದರು.
ಕಡ್ಡಾಯವಾಗಿ ಒಂದು ವರ್ಷ ಗ್ರಾಮೀಣ ಸೇವೆ ಸಲ್ಲಿಸಬೇಕು. ರಾಜ್ಯದಲ್ಲಿ ಅಧ್ಯಯನ ನಡೆಸಿ ಬೇರೆ ರಾಜ್ಯಗಳಿಗೆ ತೆರಳಿದರೆ, ಅಂತವರಿಗೆ ಗ್ರಾಮೀಣ ಸೇವೆ ಕಡ್ಡಾಯವಿಲ್ಲ ಎಂದು ಸ್ಪಷ್ಟಪಡಿಸಿದರು. ಬಳಿಕ, ವಿಧೇಯಕವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು. ಶಿಕ್ಷಣ ಪರಿಷತ್ ವಿಧೇಯಕ ಅಂಗೀಕಾರ: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷರ ಅವಧಿಯನ್ನು 70 ವರ್ಷಕ್ಕೆ ಹೆಚ್ಚಳ ಮಾಡುವ ಕುರಿತ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.