Advertisement

ಗ್ರಾಮೀಣ ಭಾಗದ ಸಮಸ್ಯೆ ಪರಿಹರಿಸುವ ಪ್ರಯತ್ನ

11:09 AM Feb 20, 2022 | Team Udayavani |

ಹುಣಸಗಿ: ಗ್ರಾಮೀಣ ಭಾಗದ ಸಮಸ್ಯೆ ಪರಿಹರಿಸಲು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಪೂರಕವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ರಾಗಪ್ರಿಯ ಹೇಳಿದರು.

Advertisement

ತಾಲೂಕಿನ ಮಾರನಾಳ ಗ್ರಾಮದಲ್ಲಿ ಹಮ್ಮಿಕೊಂಡ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಳ್ಳಿಗಳಲ್ಲಿ ಅಧಿಕಾರಿಗಳ ಸಭೆಯಿಂದ ಜನರಲ್ಲಿ ಜಾಗೃತಿ ಮೂಡುತ್ತದೆ. ಹಾಗಾಗಿ ಪ್ರತಿಯೊಂದು ಕೆಲಸಗಳು ಜನರು ಈಡೇ ರಿಸಿಕೊಳ್ಳಲು ಸುಲಭವಾಗುತ್ತದೆ ಎಂದರು.

ಶಾಸಕ ನರಸಿಂಹನಾಯಕ(ರಾಜುಗೌಡ) ಮಾತನಾಡಿ, ಗ್ರಾಮೀಣ ಭಾಗದಲ್ಲಿ ನೈಜ ಸ್ಥಿತಿ ಅರಿತುಕೊಂಡು ಸಾಧ್ಯವಾದಷ್ಟು ಸಮಸ್ಯೆಗಳು ಸ್ಥಳದಲ್ಲಿಯೇ ಪರಿಹರಿಸಲು ಸಹಕಾರಿಯಾಗುತ್ತದೆ. ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಈ ವೇಳೆ ಜಿಲ್ಲಾಧಿಕಾರಿ ಆರ್‌. ರಾಗಪ್ರಿಯ ಅವರಿಂದ ಗ್ರಾಮದಲ್ಲಿ ರುದ್ರಭೂಮಿಗೆ ಸರ್ವೇ ನಂ. 5ರಲ್ಲಿ 1.39 ಎಕರೆ ಭೂಮಿ ಮಂಜೂರು, ಸರಕಾರಿ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯಕ್ಕಾಗಿ 10 ಲಕ್ಷ ರೂ. ಅನುದಾನ ಮಂಜೂರು ಮಾಡಿದರು. ಅಲ್ಲದೆ ಭಾಗ್ಯಲಕ್ಷ್ಮೀಬಾಂಡ್‌, 50 ಫಲಾನುಭವಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪತ್ರ ವಿತರಿಸಲಾಯಿತು. ಸಹಾಯಕ ಆಯುಕ್ತ ಪ್ರಶಾಂತ ಹನಗುಂಡಿ, ತಹಶೀಲ್ದಾರ್‌ ಅಶೋಕ ಸುರಪುರಕರ್‌ ಸೇರಿದಂತೆ ತಾಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು. ಗ್ರೇಡ್‌-2 ತಹಶೀಲ್ದಾರ್‌ ಮಹಾದೇವಪ್ಪಗೌಡ ಬಿರಾದಾರ ಸ್ವಾಗತಿಸಿದರು. ಶಿಕ್ಷಕ ಎಸ್‌.ಎಸ್‌. ಮಾರನಾಳ ನಿರೂಪಿಸಿದರು. ಬಸವರಾಜ ಬಿರಾದಾರ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next