Advertisement
ಮಳೆ ಅವಾಂತರಗಳಿಂದ ಕಂಗೆಟ್ಟಿರುವ ಜನರ ಜತೆಗೆ ನಾವು ನಿಲ್ಲಬೇಕು ಎಂದು ಕರೆ ಕೊಟ್ಟಿರುವ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ.
ಎಲ್ಲೆಡೆ ಭಾರೀ ಮಳೆಯಾಗು ತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ನೆರೆ ಪೀಡಿತ ಪ್ರದೇಶ ಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸ ಬೇಕು. ಅಗತ್ಯ ನೆರವನ್ನು ಒದಗಿಸಬೇಕು. ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾ ಶಯ ಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆ ಹಾನಿ ಗಳ ಬಗ್ಗೆ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ಸರಕಾರದ ಕರ್ತವ್ಯ. ಪ್ರವಾಹಪೀಡಿತರ ಸಮಸ್ಯೆ ಆಲಿಸಿ, ನೆರವು ಒದಗಿಸಬೇಕು ಎಂದು ಹೇಳಿದ್ದಾರೆ.
Related Articles
ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರ ಪ್ರವಾಹಪೀಡಿತ ಪ್ರದೇಶಗಳ ಶಾಸಕರೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕು. ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜತೆ ನಿಲ್ಲೋಣ ಎಂದು ತಿಳಿಸಿದ್ದಾರೆ.
Advertisement